ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ತನ್ನ ಅರ್ಭಟ ಮುಂದುವರೆಸಿದ್ದು, ಇಂದು ಆರು ಜನರಿಗೆ ಕೊರೋನಾ ಪಾಸಿಟಿವ್ ಆಗಿರುವುದಾಗಿ ಜಿಲ್ಲಾಡಳಿತ ವರದಿ ದೃಢಪಡಿಸಿದೆ.
ಇಂದು ಸಂಜೆ ವೇಳೆಯಲ್ಲಿ ಸಚಿವ ಡಾ. ಕೆ ಸುಧಾಕರ್ ಅವರು ಟ್ವಿಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಆಳಂದ ತಾಲ್ಲೂಕಿನ 57 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆಂದು ದೃಢಪಡಿಸಿದ್ದ ಬೆನ್ನಲ್ಲೇ, ಮತ್ತೇ ಆರು ಜನರಿಗೆ ಸೋಂಕು ತಗಲುರುವ ಬಗ್ಗೆ ಮಾಹಿತಿ ನೀಡಿದ್ದಾರೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 44 ಜನರಿಗೆ ಸೋಂಕು ಪಾಸಿಟಿವ್ ಆಗಿದ್ದು, ಐವರು ಮೃತಪಟ್ಟಿದ್ದಾರೆ. ಏಳು ಜನ ಚಿಕಿತ್ಸೆಯಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.
ಪ್ರಸ್ತುತ ಪೀಡಿತರನ್ನು ನಿಗದಿತ ಇ.ಎಸ್.ಐ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.