ಕಲಬುರಗಿ: ಕಲಬುರಗಿ ಲೋಕಸಭಾ ಮತ್ತು ಚಿಂಚೋಳಿ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇದೇ ಮೇ 23ರಂದು ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಇಂದು ಬೆಳಿಗ್ಗೆ ಜಿಲ್ಲಾ ಚುನಾವಣಾಧಿಕಾರಿ, ಆರ್. ವೆಂಕಟೇಶ್ ಕುಮಾರ್ ಅವರು ಮತ ಎಣಿಕಾ ಕೇಂದ್ರಗಳಿಗೆ ಭೇಟಿ ನೀಡಿ, ಸಿದ್ಧತೆಗಳ ಕುರಿತು ಪರಿಶೀಲಿಸಿದರು.