ಸೇಡಂ: ಲಾಕ್ಡೌನ್ ನಡುವೆಯೂ ಪೊಲೀಸರ ಕಣ್ತಪ್ಪಿಸಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ಯತ್ನಿಸಿದ 15 ಜನರನ್ನು ಪೊಲೀಸರು ಬಂಧಿಸಿದ ಘಟನೆ ಸೇಡಂ ತಾಲೂಕಿನ ಟಿ. ಬೊಮ್ಮನಳ್ಳಿ ಗ್ರಾಮದಲ್ಲಿ ನಡೆದಿದೆ.
ಸರ್ಕಾರದ ಕಟ್ಟುನಿಟ್ಟಿನ ಆದೇಶದ ಹೊರತಾಗಿಯೂ ಸಾಮೂಹಿಕ ಪ್ರಾರ್ಥನೆ ಯತ್ನಿಸಿದವರ ಮೇಲೆ ನಿಷೇಧಾಜ್ಞೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಕೊಂಡು, ಪೊಲೀಸರು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.