ನೆರೆರಾಜ್ಯದಲ್ಲಿರುವ ಕಲ್ಯಾಣ ಕರ್ನಾಟಕದ ಜನರ ಕರೆತರಲು ಸಿಎಂಗೆ ಸಂಸದ ಡಾ.ಉಮೇಶ್ ಜಾಧವ್ ಮನವಿ

0
311

ಕಲಬುರಗಿ: ಹೊರ ರಾಜ್ಯದಲ್ಲಿರುವ ಕನ್ನಡಿಗರನ್ನ ವಿಶೇಷವಾಗಿ ಕಲ್ಯಾಣ ಕರ್ನಾಟಕದ ಜನರು ಹಾಗೂ ವಲಸೆ ಕಾರ್ಮಿಕರನ್ನು ರಾಜ್ಯಕ್ಕೆ ಕರೆತರಲು ಕ್ರಮಕೈಗೊಳ್ಳಬೇಕೆಂದು ಸಂಸದ ಡಾ.ಉಮೇಶ್ ಜಾಧವ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿಗಳನ್ನು ಭೇಟಿಯಾದ ಸಂಸದರು, ಹೊರರಾಜ್ಯದಲ್ಲಿರುವ ಕನ್ನಡಿಗರು ಮತ್ತು ಕಾರ್ಮಿಕರನ್ನು ಆರೋಗ್ಯ ತಪಾಸಣೆ ಮಾಡಿಸಿ ಅವರವರ ಊರಿಗೆ ಕರೆತರಲು ಸಹಕಾರ ನೀಡುವಂತೆ ಕೋರಿದ್ದಾರೆ.

Contact Your\'s Advertisement; 9902492681

ಮುಂಬೈ ಸೇರಿದಂತೆ ಮಹಾರಾಷ್ಟ್ರದಲ್ಲಿ ಕಲಬುರಗಿ ಗ್ರಾಮೀಣ ಪ್ರದೇಶಗಳ ಸುಮಾರು 25ರಿಂದ 30ಸಾವಿರ ಜನರಿದ್ದಾರೆ. ನೆರೆಯ ತೆಲಂಗಾಣ, ಆಂಧ್ರಪ್ರದೇಶ ಮುಂತಾದೆಡೆಯಲ್ಲಿಯೂ ಜಿಲ್ಲೆಯ ಜನರಿದ್ದಾರೆ. ಇವರೆಲ್ಲರನ್ನೂ ಕರೆತರುವ ವ್ಯವಸ್ಥೆಯಾಗಬೇಕು.

ಒಂದುವೇಳೆ ಲಾಕ್‍ಡೌನ್ ಹಿನ್ನಲೆಯಲ್ಲಿ ಕರೆತರಲು ಸಾಧ್ಯವಾಗದಿದ್ದರೆ ಜನರು ಯಾವ ರಾಜ್ಯದಲ್ಲಿ ಇದ್ದಾರೋ ಅವರಿಗೆಲ್ಲಾ ಅಲ್ಲಿಯ ಸರ್ಕಾರದ ಜೊತೆ ಮಾತನಾಡಿ, ಊಟೋಪಚಾರ ಕಲ್ಪಿಸಬೇಕು. ಗರ್ಭಿಣಿ, ಬಾಣಂತಿಯರು, ವಿವಿಧ ಕಾಯಿಲೆಗಳಿಂದ ಬಳಲುವಂತವರಿದ್ದರೆ ಅವರಿಗೆಲ್ಲಾ ಮಾತ್ರೆ, ಔಷಧಿ ವ್ಯವಸ್ಥೆ ಮಾಡಬೇಕು ಎಂದಿದ್ದಾರೆ

ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು, ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಗಳು, ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿರುತ್ತಾರೆ.

ಹಾಗೆಯೇ ಜಿಲ್ಲೆಯಲ್ಲಿ ಸಂಸದರು, ಶಾಸಕರು ಹಾಗೂ ಜಿಲ್ಲಾಡಳಿತದಿಂದ ಒಳ್ಳೆಯ ಕೆಲಸ ನಡೆಯುತ್ತಿದ್ದು, ಆದಷ್ಟು ಬೇಗ ಕೊರೋನಾ ಮುಕ್ತ ಜಿಲ್ಲೆ ಮಾಡುವಂತೆ ಸಿಎಂ ಸೂಚಿಸಿರುವುದಾಗಿ ಉಮೇಶ್ ಜಾಧವ್ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್,ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here