ಆಳಂದ: ಶಾಸಕ ಸುಭಾಷ್ ಆರ್ ಗುತ್ತೇದಾರ ಅವರು ಶನಿವಾರ ತಾಲೂಕಿನ ಧುತ್ತರಗಾಂವ ತಾಂಡಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ಯೋಜನೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 80 ಜನ ಕಾರ್ಮಿಕರಿಗೆ ಮಾಸ್ಕ್‍ಗಳನ್ನು ವಿತರಿಸಿದರು. ನಂತರ ಮಾತನಾಡಿದ ಶಾಸಕರು, ಕಾರ್ಮಿಕರು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸಬೇಕು ಅದರ ಜೊತೆಗೆ ಆರೋಗ್ಯದ ಕಡೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕು. ಕೆಮ್ಮು, ನೆಗಡಿ, ಜ್ವರದ ಲಕ್ಷಣಗಳು ಕಂಡು ಬಂದಾಗ ಸಮೀಪದ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಾ.ಪಂ ಇಒ ಸಂಜಯರೆಡ್ಡಿ ಮುಖಂಡರಾದ ವೀರಣ್ಣ ಮಂಗಾಣೆ, ಚಂದ್ರಕಾಂತ ಮಂಗಾಣೆ, ಶಿವಾನಂದ ಪಾಟೀಲ, ಹೀರು ಪವಾರ, ಶಂಕರರಾವ ಪಾಟೀಲ, ದಯಾನಂದ ಸೇರಿದಂತೆ ಇತರರು ಇದ್ದರು.