ಚಿತ್ತಾಪುರ: ತಾಲೂಕಿನ ಭೀಮನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಮತೀರ್ಥ ಗ್ರಾಮದ ನಾಲಾ ಹೊಳೆ ಹೊತ್ತುವ ಕೆಲಸವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ವನ್ನು ಕೈಗೆತ್ತಿಕೊಳ್ಳಲಾಗಿದ್ದು ಈ ಉದ್ಯೋಗ ಖಾತ್ರಿ ಯೋಜನೆಯಡಿ 185 ಜನರು ಹೆಸರು ನೋಂದಾಯಿಸಿಕೊಂಡು, ಕೂಲಿ ಕಾರ್ಮಿಕರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ.
ಕೊರೊನ್ ವೈರಸ್ ಹರಡದಂತೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಪ್ರತಿಯೊಬ್ಬ ಕೂಲಿಕಾರ್ಮಿಕರಿಗೆ ಮಾಸ್ಕ್ ಸ್ಯಾನಿಟೈಸರ್ ನೀಡಿ ಸಾಮಾಜಿಕ ಅಂತರದೊಂದಿಗೆ ಉದ್ಯೋಗ ಖಾತ್ರಿ ಯೋಜನೆ ಆರಂಭ ಮಾಡಲಾಗಿದ್ದು ಲಾಕ್ ಡೌನ್ ಮಧ್ಯದಲ್ಲಿಯೂ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ
ಭೀಮನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಮತೀರ್ಥ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕಾಮಗಾರಿ ಆರಂಭವಾಗಿರುವುದರ ಕುರಿತು ಮಾಹಿತಿ ನೀಡಿದ ತಾಲೂಕು ಪಂಚಾಯತಿ ಇಓ ವನಿತಾ ಪೂಜಾರಿ ತಾಲೂಕಿನಲ್ಲಿ ಒಟ್ಟು 42 ಗ್ರಾಮಪಂಚಾಯತಿಗಳಿಗೆ 39 ಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜನರು ಕೆಲಸ ಮಾಡುತ್ತಿದ್ದಾರೆ ಗ್ರಾಮದಲ್ಲಿ 185 ಜನರಿಗೆ ಜಾಬ್ ಕಾರ್ಡ್ ಕೊಡಲಾಗಿದೆ ಎಂದು ತಿಳಿಸಿದ್ದಾರೆ.