ಕುಡಿಯುವ ನೀರಿನ ಸಮಸ್ಯೆ: ಸಾರ್ವಜನಿಕರು ದೂರು ನೀಡಲು ಸಹಾಯವಾಣಿ ಕೇಂದ್ರ ಸ್ಥಾಪನೆ

0
116

ಕಲಬುರಗಿ: ಕಲಬುರಗಿ ಜಿಲ್ಲೆಯ 7 ತಾಲೂಕುಗಳು ಬರಪೀಡಿತ ತಾಲೂಕುಗಳೆಂದು ಘೋಷಣೆಯಾಗಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದಲ್ಲಿ ಸಾರ್ವಜನಿಕರು ದೂರು ನೀಡಲು ಕಲಬುರಗಿ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ ಅವರು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ದೂರು ನೀಡಬಹುದಾಗಿದೆ. ತಾಲೂಕಿನ ಹೆಸರು ಹಾಗೂ ಸಹಾಯವಾಣಿ ಸಂಖ್ಯೆಯ ವಿವರ ಇಂತಿದೆ. ಅಫಜಲಪುರ 08470-283024. ಆಳಂದ: 08477-202102, ಮೊಬೈಲ್ ಸಂಖ್ಯೆ 9742971700 ಹಾಗೂ 9036621394. ಚಿಂಚೋಳಿ: 9845598521, 7090372995. ಚಿತ್ತಾಪುರ : 08474-236111 ಜೇವರ್ಗಿ : 08442-236896. ಕಲಬುರಗಿ : 08472-249352. ಸೇಡಂ : 08441-276036.

Contact Your\'s Advertisement; 9902492681

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1077 ಹಾಗೂ 08472-278677ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here