ಕಲಬುರಗಿ: ನಗರದ ಮಹೆಬೂಬ್ ನಗರದ 50 ವರ್ಷದ ಪುರುಷ (ರೋಗಿ ಸಂಖ್ಯೆ-394) ಮತ್ತು ಮೋಮಿನಪುರ ಪ್ರದೇಶದ 19 ವರ್ಷದ ಯುವಕ (ರೋಗಿ ಸಂಖ್ಯೆ-395) ಅವರು ಕೊರೋನಾ ಸೋಂಕಿನಿಂದ ಗುಣಮುಖರಾದ ಹಿನ್ನೆಲೆಯಲ್ಲಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ತಿಳಿಸಿದ್ದಾರೆ.
ಇವರಿಬ್ಬರಿಗೂ ಏ.20ರಂದು ಕೊರೋನಾ ಸೋಮಕು ದೃಢವಾಗಿದ್ದರಿಂದ ಚಿಕಿತ್ಸೆಗೆ ದಾಖಲಾಗಿಸಿತ್ತು.
ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ ಪಾಸಿಟಿವ್ ಪತ್ತೆಯಾದ 64ರಲ್ಲಿ ಒಟ್ಟು 24 ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 6 ಜನ ನಿಧನ ಹೊಂದಿದ್ದು, 34 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.