ಕಲಬುರಗಿ: ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಲ್ಲಿ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಎಂಟು ಪ್ರಕರಣಗಳು ದಾಖಲಾಗಿವೆ.
ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ 3, ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ 1, ರೋಜಾ ಪೊಲೀಸ್ ಠಾಣೆಯಲ್ಲಿ 1, ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ 3 ಸೇರಿದಂತೆ ಒಟ್ಟು 8 ಪ್ರತ್ಯೇಕ ಪ್ರಕರಣ ದಾಖಲಾಗಿವೆ ಎಂದು ತಿಳಿದುಬಂದಿದೆ.
ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿರ್ದೇಶನದಂತೆ ಹೋಂ ಕ್ವಾರಂಟೈನ್ ಪಾಲಿಸುವಂತೆ ಸೂಚಿಸಲಾಗಿದೆ ಜನರು ನಿಯಮ ಉಲ್ಲಂಘನೆದವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.