ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ನಾಥೋರಾಮ್ ಗೋಡ್ಸೆಯನ್ನು ಹೊಗಳಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರೊಬ್ಬರಿಗೆ ಬಿಜೆಪಿ ಪಕ್ಷದ ಸದಸ್ಯತ್ವದಿಂದ ತೆಗೆದು ಹಾಕಿ ಆದೇಶ ಹೋರಡಿಸಲಾಗಿದೆ.
ಹೌದು ತುಮಕೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಟಿ.ಎಚ್ ಹನುಮಂತರಾಜು ಅವರಿಗೆ ಬಿಜೆಪಿ ಪಕ್ಷದಿಂದ ಉಚ್ಛಾಟಿಸಿ ಬಿಜೆಪಿ ಪಕ್ಷದ ರಾಜ್ಯಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಆದೇಶ ಹೋರಡಿಸಿದ್ದಾರೆ.
ಹನುಮಂತರಾಜು ಸಾಮಾಜಿಕ ಜಾಲತಾಣಗಳ ತಮ್ಮ ಪೋಸ್ಟಗಳಲ್ಲಿ ಗೋಡ್ಸೆಯನ್ನು ಹೊಗಳಿದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಥಮ ಸದಸ್ಯತ್ವದಿಂದ ಉಚ್ಛಾಟನೆಗೊಳಿಸಿ ಬಿಜೆಪಿ ರಾಜ್ಯಧ್ಯಕ್ಷ ಆದೇಶ ಹೋರಡಿಸಿದ್ದಾರೆ.