ಕಲಬುರಗಿ: ನಗರದ ಇಬ್ಬರು ಕೋವಿಡ್-19 ಪೀಡಿತರು ಸೋಂಕಿನಿಂದ ಗುಣಮುಖರಾಗಿ ಶನಿವಾರ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.
ಕಲಬುರಗಿ ನಗರದ ಮೋಮಿನಪುರ ಪ್ರದೇಶದ 35 ವರ್ಷದ ಯುವತಿ (ರೋಗಿ ಸಂಖ್ಯೆ-423) ಮತ್ತು ಉಮರ್ ಕಾಲೋನಿಯ 32 ವರ್ಷದ ಯುವಕ (ರೋಗಿ ಸಂಖ್ಯೆ-445) ಶನಿವಾರ ಬಿಡುಗಡೆಯಾದವರು.
ಇದರಿಂದ ಜಿಲ್ಲೆಯಲ್ಲಿ ಕೊರೋನಾ ಪೀಡಿತ 67 ರೋಗಿಗಳಲ್ಲಿ 31 ರೋಗಿ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. 6 ಜನ ನಿಧನರಾಗಿದ್ದು, ಉಳಿದಂತೆ 30 ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.