ಕಲಬುರಗಿ: ಇಂದು ಜಿಲ್ಲೆಯಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಸಿಹಿ, ಕಹಿ ವರದಿಯಾಗಿದೆ, ಒಂದೇ ದಿನದಲ್ಲಿ ನಾಲ್ವರಿಗೆ ಕೋವಿಡ್-19 ಪಾಸಿಟಿವ್ ವರದಿಯಾದರೇ, ಇನ್ನೊಂದೆಡೆ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 13 ಜನ ರವಿವಾರ ಸೋಂಕಿನಿಂದ ಗುಣಮುಖರಾಗಿ ಅಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆಂದು ಜಿಲ್ಲಾಧಿಕಾರಿ ಶರತ್ ಬಿ ದೃಢ ಪಡಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕು ಪೀಡಿತರ ಸಂಖ್ಯೆ 71ಕ್ಕೆ ಏರಿಕೆಯಾಗಿದ್ದು, ರೋಗಿಗಳಲ್ಲಿ 44 ರೋಗಿಗಳು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಮತ್ತು ಆರು ಜನ ಸೋಂಕಿಗೆ ಬಲಿಯಾಗಿದ್ದಾರೆ.