ಕಲಬುರಗಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಸಿಲುಕಿದ್ದ ವಲಸಿಗ ಕಾರ್ಮಿಕರು ವಿಶೇಷ ಶ್ರಮಿಕ ರೈಲಿನ ಮೂಲಕ ಮಂಗಳವಾರ ನಸುಕಿನ ಜಾವ 2 ಗಂಟೆಗೆ ಕಲಬುರಗಿ ರೈಲು ನಿಲ್ದಾಣಕ್ಕೆ ಆಗಮಿಸಿದರು.
ಕಾರ್ಮಿಕರನ್ನು ಹೊತ್ತಿಕೊಂಡು ಮುಂಬೈನಿಂದ ಸೋಮವಾರ ಹೊರಟಿದ್ದ ವಿಶೇಷ ರೈಲು ಮಂಗಳವಾರ ಬೆಳಿಗ್ಗೆ 2 ಗಂಟೆಗೆ ಕಲಬುರಗಿ ರೈಲ್ವೆ ನಿಲ್ದಾಣ ತಲುಪಿತು.
ಪ್ರಯಾಣಿಕರಿಗೆ ರೈಲು ನಿಲ್ದಾಣದಲ್ಲಿಯೆ ಸ್ಕ್ರೀನಿಂಗ್ ಮಾಡಿ, ಕೈಗಳಿಗೆ ಸೀಲು ಹಾಕಿ ಅವರವರ ಊರುಗಳ ಬಳಿಯೆ ಸರ್ಕಾರಿ ಕ್ವಾರಂಟೈನ್ನಲ್ಲಿರಿಸಲು ಜಿಲ್ಲಾಡಳಿತವು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿರುತ್ತದೆ.
ಈ ಸಂದರ್ಭದಲ್ಲಿ ಹಾಜರಿದ್ದ ಕಲಬುರಗಿ ಸಂಸದ ಡಾ.ಉಮೇಶ ಜಾಧವ ಅವರು ಪ್ರಯಾಣಿಕರನ್ನು ರೈಲು ನಿಲ್ದಾಣದಲ್ಲಿ ಬರಮಾಡಿಕೊಂಡರು.