ಲಾಕ್ ಡೌನ್ ನಿಯಮ ಉಲ್ಲಂಘನೆ: ಮಾಜಿ ಸಚಿವ ಸೇರಿ 23ಜನರ ಮೇಲೆ ಪ್ರಕರಣ ದಾಖಲು

0
220

ಕಲಬುರಗಿ: ಮಾಜಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಸೇರಿದಂತೆ ಇತರೆ 23 ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸಭೆ ನಡೆಸಿದ ಆರೋಪದ ಹಿನ್ನೆಲೆ ಸುಲೇಪೆಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಲಂ 144 ಜಾರಿಯಿದ್ದರು ಸಹ ಡಾ. ಶರಣ ಪ್ರಕಾಶ್ ಪಾಟೀಲ ನೂರಾರು ಜನರನ್ನು ಸೇರಿಸಿ ಸುಲೇಪೇಟ್ ನ ಖಾಸಗಿ ಕಲ್ಯಾಣ ಮಂಟಪ ಒಂದರಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ಸೇಡಂ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಅನಧಿಕೃತವಾಗಿ ಸಭೆ ನಡೆಸಿದರು ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here