ಶಾಲಾ ಶಿಕ್ಷಕ ವೃಂದದ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗೆ ಸಿದ್ಧತೆ

0
327

ಶಿವಮೊಗ್ಗ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಮೇ 25ಮತ್ತು 26ರಂದು ನಡೆಯಲಿದ್ದು, ಕಟ್ಟುನಿಟ್ಟಿನಿಂದ ಪರೀಕ್ಷೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡುವಂತೆ ಅಪರ ಜಿಲ್ಲಾಧಿಕಾರಿ ಪೂರ್ಣಿಮಾ ಅವರು ಸೂಚಿಸಿದರು.

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರೀಕ್ಷಾ ಸಿದ್ಧತೆಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದರು.

Contact Your\'s Advertisement; 9902492681

ಜಿಲ್ಲೆಯಲ್ಲಿ ಒಟ್ಟು 9ಪರೀಕ್ಷಾ ಕೇಂದ್ರಗಳಿದ್ದು ಮೇ 25ರಂದು ಮೊದಲ 1783 ಹಾಗೂ ಎರಡನೇ ದಿನ 1415 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಮೇ 25ರಂದು ಸಾಮಾನ್ಯ ಪತ್ರಿಕೆ ಹಾಗೂ ಭಾಷೆ-ಆಂಗ್ಲ ಪತ್ರಿಕೆ, ಮೇ 26ರಂದು ಗಣಿತ ಮತ್ತು ವಿಜ್ಞಾನ, ಸಮಾಜ ಪಾಠಗಳು ಹಾಗೂ ಭಾಷಾ ಸಾಮಥ್ರ್ಯ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200ಮೀಟರ್ ವ್ಯಾಪ್ತಿಯಲ್ಲಿ 144ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಒಬ್ಬರು ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಪರೀಕ್ಷಾ ಕೇಂದ್ರದ ವ್ಯಾಪ್ತಿಯೊಳಗೆ ಯಾವುದೇ ಕಾರಣಕ್ಕೂ ಅಭ್ಯರ್ಥಿಗಳು ಹಾಗೂ ಪರೀಕಾ ಕಾರ್ಯಕ್ಕೆ ಸಂಬಂಧಿಸಿದವರನ್ನು ಬಿಟ್ಟು ಬೇರೆ ಯಾರನ್ನೂ ಬಿಡಬಾರದು ಎಂದು ತಾಕೀತು ಮಾಡಿದರು.

ಪರೀಕ್ಷಾ ಕೊಠಡಿಗೆ ಮೊಬೈಲ್, ಕ್ಯಾಲುಕುಲೇಟರ್ ಸೇರಿದಂತೆ ಇಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನು ನಿರ್ಬಂಧಿಸಲಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷಾ ಅವ್ಯವಹಾರಕ್ಕೆ ಆಸ್ಪದವಾಗದಂತೆ ಕಟ್ಟೆಚ್ಚರದಿಂದ ಕಾರ್ಯನಿರ್ವಹಿಸಬೇಕು. ಪರೀಕ್ಷಾ ಅವ್ಯವಹಾರಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಯನ್ನು ಜವಾಬ್ದಾರಿಯಾಗಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಭ್ಯರ್ಥಿ ತನ್ನ ಎಡಗೈ ಹೆಬ್ಬೆರಳಿನ ಗುರುತನ್ನು ಓ.ಎಂ.ಆರ್. ಉತ್ತರಪತ್ರಿಕೆಯಲ್ಲಿ ನಿಗದಿಪಡಿಸಿರುವ ಸ್ಥಳದಲ್ಲಿ ಕಡ್ಡಾಯವಾಗಿ ಹಾಕಬೇಕು. ಪರೀಕ್ಷೆ ಪ್ರಾರಂಭವಾಗುವ 30ನಿಮಿಷಗಳ ಮೊದಲು ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡಲಾಗುವುದು. ಉತ್ತರಿಸಲು ಪ್ರಾರಂಭಿಸುವುದಕ್ಕೆ ನಿಗದಿಪಡಿಸಲಾದ ಸಮಯದ ನಂತರ ಬರುವ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಸಮಂಗಲಾ ಕುಚಿನಾಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here