ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಮೊಟ್ಟೆ ಹಾಗೂ ಪೌಷ್ಠಿಕ ಆಹಾರ ನೀಡದೆ ಅನ್ಯಾಯ ಮಾಡುತ್ತಿರುವ ಸಿ.ಡಿ.ಪಿ.ಓ. ಮತ್ತು ಮೇಲ್ವಿಚಾರಕರ ವಿರುದ್ಧ ದಲಿತ ಹಕ್ಕುಗಳ ಸಮಿತಿ ಕಲಬುರಗಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದ ಬಡ ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಪೌಷ್ಠಿಕ ಆಹಾರ ನೀಡದೆ ಅಂಗನವಾಡಿ ಕಾರ್ಯಕರ್ತೆಯರಿಂದ ಬಿಳಿ ಹಾಳೆಯ ಮೇಲೆ ಸಹಿ ಮಾಡಿಸಿಕೊಂಡು ಸುಳ್ಳು ದಾಖಲೆ ಸೃಷ್ಟಿಸಲಾಗಿದೆ. ಇದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಮುಖಂಡರಾದ ಸುಧಾಮ ಧನ್ನಿ, ಪಾಂಡುರಂಗ ಮಾವಿನಕರ ಒತ್ತಾಯಿಸಿದರು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.