ಯಾವೊತ್ತೂ ಯಡಿಯೂರಪ್ಪನವರಿಗೆ ನಮ್ಮ ಬೆಂಬಲ: ಗುತ್ತೇದಾರ, ಮತ್ತಿಮೂಡ

0
283
ಕಲಬುರಗಿ: ಬಿಜೆಪಿ ಹಿರಿಯ ಶಾಸಕ ಉಮೇಶ ಕತ್ತಿ ಮನೆಯಲ್ಲಿ ಗುರುವಾರ ರಾತ್ರಿ ಸಭೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಆ ಸಮಯದಲ್ಲಿ ತಾವು ಕೂಡ ಸಿಎಂ ಅವರಿಗೆ ರೆಬೆಲ್ ಇದ್ದೇವೆ ಎಂದು ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವುದು ಸುಳ್ಳು ಎಂದು ಆಳಂದ ಶಾಸಕ ಸುಭಾಷ ಗುತ್ತೇದಾರ, ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಜಂಟಿಯಾಗಿ ತಿಳಿಸಿದ್ದಾರೆ.
ಟಿವಿ ಯಲ್ಲಿ ಪ್ರಸಾರವಾಗುತ್ತಿರುವುದು ಸತ್ಯಕ್ಕೆ ದೂರವಾದು ಮಾತು ನಾವು ಯಾವಾಗಲೂ ಮಾನ್ಯ ಶ್ರೀ ಮುಖ್ಯ ಮಂತ್ರಿಗಳಾದ ಯಡಿಯೂರಪ್ಪನವರಿಗೆ ನಮ್ಮ ಬೆಂಬಲ ಕೊನೆಯವರೆಗೂ ಅವರ ಜೊತೆಯಲ್ಲಿಯೆ ಇರುತ್ತೇವೆ ಎಂದು ಹೇಳಿದ್ದಾರೆ. ನಾವು ಆ ಸಭೆಯಲ್ಲಿ ಭಾಗವಹಿಸಿಲ್ಲ.ಇದು ಸತ್ಯಕ್ಕೆ ದೂರವಾದ ಮಾತು ಎಂದು ತಮ್ಮ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here