ಗಂಗಾವತಿ: ಬಳ್ಳಾರಿ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಕೊಲ್ಲಿನಾಗೇಶ್ವರ ಕಾಲೇಜ್ ನಲ್ಲಿ 2ಬಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ಹೆಚ್ಚಾಗಿ ಪಡೆಯುದರ ಬಗ್ಗೆ ಮಾಹಿತಿ ಪಡೆದ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ಸಮಿತಿಯು ತಕ್ಷಣ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಪ್ರಾಂಶುಪಾಲರನ್ನು ಭೇಟಿಮಾಡಿತು.
ಪ್ರಾಂಶುಪಾಲರು ಮತ್ತು ವಿದ್ಯಾರ್ಥಿಗಳ ಮಧ್ಯೆ ವಾಗ್ವಾದ ನಡೆದು ವಿದ್ಯಾರ್ಥಿಗಳು ಬೇಡಿಕೆಗೆ ಆಗ್ರಹಿಸಿದರು.
ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್ ಮಾತನಾಡಿ ಪದವಿ ಕಾಲೇಜಿನ 2 ಬಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಶುಲ್ಕ ವಿನಾಯಿತಿಗೆ ಕಾಲೇಜು ಶಿಕ್ಷಣ ಮಂಡಳಿ ಆದೇಶ ಹೊರಡಿಸಿದ್ದರೂ ಸರ್ಕಾರಿ ಪದವಿ ಕಾಲೇಜ್ ನಲ್ಲಿ ಹೆಚ್ಚುವರಿ ಶುಲ್ಕ ಪಡೆಯಲಾಗುತ್ತಿದೆ. SC,ST ಮತ್ತು OBC ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿಯ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕರೊನ ತಡೆಗಾಗಿ ಲಾಕ್ಡೌನ್ ಆಗಿದ್ದರಿಂದ ಬಡ ಕುಟುಂಬಗಳು ಸಂಕಷ್ಟದಲ್ಲಿವೆ. ಅವರಿಂದ ಪರೀಕ್ಷಾ ಶುಲ್ಕ ಭರಿಸುವುದು ಅಸಾಧ್ಯವಾಗುತ್ತಿದೆ. ಆದ್ದರಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್, ಕ್ಯಾಂಪಸ್ ಫ್ರಂಟ್ ಕರ್ನಾಟಕ ಸಮಿತಿ ಸದಸ್ಯರಾದ ಸೈಯದ್ ಸರ್ಫಾರಾಜ್, ಎಸ್.ಎಫ್.ಐ ತಾಲೂಕು ನಾಯಕರಾದ ಗ್ಯಾನೇಶ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು..
ಬೇಡಿಕೆಗಳು :-
1) ಪ್ರವರ್ಗ-2ಬಿ ವಿದ್ಯಾರ್ಥಿಗಳು Low income ಹಾಕಿ ಶುಲ್ಕ ಪಾವತಿಸಬೇಕು.
2) ಪ್ರಾಂಶುಪಾಲರು ಈ ಸಮಸ್ಯೆಯ ಬಗ್ಗೆ ಬಳ್ಳಾರಿ ವಿಶ್ವವಿದ್ಯಾನಿಲಯ, ಅಲ್ಪಸಂಖ್ಯಾತರ ಇಲಾಖೆ, ಹಾಗೂ ಸರ್ಕಾರಕ್ಕೆ ಮಾಹಿತಿ ನೀಡಬೇಕು.