ಕ್ವಾರಂಟೈನ್‍ನಲ್ಲಿರುವ ಜನರು ಸರ್ಕಾರದ ಆದೇಶ ಉಲ್ಲಂಘಿಸಿದರೆ ಕ್ರಮ

0
42

ಶಹಾಬಾದ: ಹೊರರಾಜ್ಯಗಳಿಂದ ಬಂದು ಕ್ವಾರಂಟೈನ್‍ನಲ್ಲಿರುವ ವ್ಯಕ್ತಿಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೇ ಅವರ ವಿರುದ್ಧ ಕ್ರಮಿನಲ್ ಕೇಸ್ ದಾಖಲಿಸಲಾಗುವುದೆಂದು ತಹಸೀಲ್ದಾರ ಸುರೇಶ ವರ್ಮಾ ತಿಳಿಸಿದ್ದಾರೆ.

ಹೊರರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಬರುವ ವ್ಯಕ್ತಿಗಳ ಸಂಚಾರ ನಿಯಂತ್ರಿಸಲು ವಿಪತ್ತು ನಿರ್ವಹಣಾ ಕಾಯ್ದೆಯ ಪ್ರಕಾರ ತಿದ್ದುಪಡಿಯನ್ನು ತರಲಾಗಿದ್ದು, ಮಹಾರಾಷ್ಟ್ರದಿಂದ ಬರುವ ವ್ಯಕ್ತಿಗಳಿಗೆ ಕಡ್ಡಾಯವಾಗಿ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. ನಂತರ ಪರೀಕ್ಷೆ ನಡೆಸಿ 14 ದಿನಗಳ ಹೋಂ ಕ್ವಾರಂಟೈನ್ ಮಾಡಲಾಗುತ್ತದೆ. ಅಲ್ಲದೇ ಮಹಾರಾಷ್ಟ್ರ ಹೊರತುಪಡಿಸಿ ಬೇರೆ ರಾಜ್ಯಗಳಿಂದ ಬರುವ ವ್ಯಕ್ತಿಗಳಿಗೆ 14 ದಿನ ಹೋಂ ಕ್ವಾರಂಟೈನ್ ಮಾಡಲಾಗುವುದು.

Contact Your\'s Advertisement; 9902492681

ಈ ಸಮಯದಲ್ಲಿ ಗ್ರಾಮ ಲೆಕ್ಕಿಗರು, ಆರೋಗ್ಯ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಮನೆಮನೆಗೆ ತೆರಳಿ ಪ್ರತಿನಿತ್ಯ ಆರೋಗ್ಯ ಮತ್ತು ಚಲನ ವಲನಗಳ ಬಗ್ಗೆ ವೀಕ್ಷಣೆ ಮಾಡಲಾಗುವುದು.

ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿ ಹೊರಗಡೆ ಬಂದರೆ ಅವರ ವಿರುದ್ಧ ಕೇಸ್ ದಾಖಲಿಸಿ, ಮತ್ತೆ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುವುದು. ಆದ್ದರಿಂದ ಹೊರರಾಜ್ಯಗಳಿಂದ ಬಂದು ಕ್ವಾರಂಟೈನ್‍ನಲ್ಲಿರುವ ವ್ಯಕ್ತಿಗಳು ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೇ ನಿರ್ದಾಕ್ಷಣವಾಗಿ ಕ್ರಮ ಜರುಗಿಸಲಾಗುತ್ತದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here