ಗುತ್ತೇದಾರಗೆ ರಾಜಕೀಯ ಸ್ಥಾನಮಾನ ಕಲ್ಪಿಸಿ

0
156

ವಾಡಿ: ಕಲಬುರಗಿ ಲೋಕಸಭೆ ಚುನಾವಣೆಯಲ್ಲಿ ಕಮಲ ಅರಳಲು ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಪ್ರಮುಖ ಕಾರಣರಾಗಿದ್ದಾರೆ. ಪಕ್ಷಕ್ಕೆ ಮತ್ತಷ್ಟು ಬಲ ತುಂಬಲು ಮಾಲಿಕಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಿಸಬೇಕು ಎಂದು ಭಾಜಪ ಎಸ್‌ಸಿ ಮೋರ್ಚಾ ಚಿತ್ತಾಪುರ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ ಒತ್ತಾಯಿಸಿದ್ದಾರೆ.

Contact Your\'s Advertisement; 9902492681

ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು ಕಲ್ಯಾಣ ಕರ್ನಾಟಕ ಭಾಗದ ಜನಪರ ರಾಜಕಾರಣಿಯಾಗಿ ಬಿಜೆಪಿ ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿದ್ದಾರೆ. ಸಚಿವರಾಗಿ, ಶಾಸಕರಾಗಿ ಅನೇಕ ಅಭಿವೃದ್ಧಿಪರ ಕೆಲಸಗಳನ್ನು ಮಾಡಿದ್ದಾರೆ. ಡಾ.ಉಮೇಶ ಜಾಧವ ಅವರು ಸಂಸದರಾಗಿ ದೆಹಲಿಗೆ ಹೋಗಲು ಮಾಲಿಕಯ್ಯ ಅವರ ಶ್ರಮ ಹೆಚ್ಚಿದೆ.

ಪಕ್ಷದ ಕಾರ್ಯಕರ್ತರ ಶಕ್ತಿಯಾಗಿರುವ ಗುತ್ತೇದಾರ ಅವರಿಗೆ ರಾಜಕೀಯ ಸ್ಥಾನಮಾನ ಸಿಕ್ಕರೆ ಮತ್ತಷ್ಟು ಸಂಘಟನಾತ್ಮಕ ಕ್ರೀಯಾಶೀಲತೆ ಹೆಚ್ಚುತ್ತದೆ. ಯಾವೂದೇ ಕಾರಣಕ್ಕೂ ಗುತ್ತೇದಾರ ಅವರನ್ನು ವಿಧಾನ ಪರಿಷತ್ ಸ್ಥಾನದಿಂದ ವಂಚಿಸಬಾರದು ಎಂದು ಸಿಎಂಗೆ ಬರೆದ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here