ವಿಶೇಷ ಹಣಕಾಸು ಪ್ಯಾಕೇಜ್ ಬಿಡುಗಡೆಗೆ ಒತ್ತಾಯ: ಅತಿಥಿ ಉಪನ್ಯಾಸಕರ ಆತ್ಮಹತ್ಯೆ: ಪರಿಹಾರಕ್ಕೆ ಆಗ್ರಹ

0
128

ವಾಡಿ: ಲಾಕ್‍ಡೌನ್ ಹೇರಿಕೆಯಿಂದ ಉಂಟಾದ ಆರ್ಥಿಕ ಸಮಸ್ಯೆಯನ್ನು ಎದುರಿಸಲಾಗದೆ ಆತ್ಮಹತ್ಯೆಗೆ ಶರಣಾದ ಮಂಡ್ಯ ಜಿಲ್ಲೆಯ ಮಳವಳ್ಳಿ ಸರಕಾರಿ ಪದವಿ ಕಾಲೇಜಿನ ಇಬ್ಬರು ಅತಿಥಿ ಉಪನ್ಯಾಸಕರಿಗೆ ಸರಕಾರ ಕೂಡಲೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ನಗರ ಘಟಕ ಆಗ್ರಹಿಸಿದೆ.

Contact Your\'s Advertisement; 9902492681

ಅತಿಥಿ ಉಪನ್ಯಾಸಕರ ಈ ದುರಂತ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಆಲ್ ಇಂಡಿಯಾ ಸೇವ್ ಎಜುಕೇಷನ್ ಕಮೀಟಿ (ಎಐಎಸ್‍ಇಸಿ) ಸಮಿತಿಯ ನಗರ ಸಂಚಾಲಕ ಯೇಸಪ್ಪ ಕೇದಾರ, ಒಂದೇ ತಿಂಗಳ ಅಂತರದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕಿ ಕೋಕಿಲಾ ಮತ್ತು ಇತಿಹಾಸ ಉಪನ್ಯಾಸಕ ಸುರೇಶ ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖದಾಯಕ ಸಂಗತಿ ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣದ ಹೆಸರಿನಲ್ಲಿ ಇಡೀ ದೇಶದಾದ್ಯಂತ ಹೇರಿದ ಲಾಕ್‍ಡೌನ್ ನಿಂದಾಗಿ ಅತಿಥಿ ಉಪನ್ಯಾಸಕರ ಪರಸ್ಥಿತಿ ತುಂಬಾ ಗಂಭೀರವಾಯಿತು. ಪರಿಣಾಮ ಅತಿಥಿ ಉಪನ್ಯಾಸಕರಿಗೆ ವಿಶೇಷ ಹಣಕಾಸು ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಶಿಕ್ಷಣ ಉಳಿಸಿ ಸಮಿತಿ ಆನ್‍ಲೈನ್ ಚಳುವಳಿ ನಡೆಸಿತ್ತು. ಸರಕಾರದ ನಿರ್ಲಕ್ಷ್ಯ ಧೋರಣೆಯಿಂದಾಗಿ ಎರರು ಅಮೂಲ್ಯ ಜೀವಗಳನ್ನು ಕಳೆದುಕೊಳ್ಳುವಂತಾಯಿತು ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರಕಾರ ಇನ್ನಾದರೂ ಎಚ್ಚೆತ್ತುಕೊಂಡು ತೀವ್ರ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರ ನೆರವಿಗೆ ದಾವಿಸಬೇಕು. ಮೃತ ಶಿಕ್ಷಕರ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು. ಕೆಲವು ಜಿಲ್ಲೆಗಳ ಅತಿಥಿ ಉಪನ್ಯಾಸಕರಿಗೆ ಇನ್ನೂ ಗೌರವಧನ ಬಿಡುಗೆಯಾಗಿಲ್ಲ. ಕೂಡಲೇ ಕ್ರಮಕೈಗೊಳ್ಳಬೇಕು. ಲಾಕ್‍ಡೌನ್ ಪರಿಣಾಮದಡಿ ಈ ಬೋಧಕರಿಗಾಗಿ ವಿಶೇಷ ಹಣಕಾಸು ಪ್ಯಾಕೇಜ್ ಬಿಡುಗಡೆ ಮಾಡಬೇಕು. ಉದ್ಯೋಗ ಭದ್ರತೆ ಒದಗಿಸಿ ಖಾಯಂ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here