ಖರ್ಗೆ ಅವರಿಗೆ ಜೀವ ಬೆದರಿಕೆ ಕಾಕಿದ ವ್ಯಕ್ತಿಯ ಬಂಧನಕ್ಕೆ ಆಗ್ರಹ

0
60

ಶಹಾಬಾದ: ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಅಪರಿಚಿತ ವ್ಯಕ್ತಿಯನ್ನು ಬಂಧಿಸಬೇಕೆಂದು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ತಾಲೂಕಾ ಕಾಂಗ್ರೆಸ್ ಅಧ್ಯಕ್ಷ ರಾಜೇಶ ಯನಗುಂಟಿಕರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯಸಭಾ ಸ್ಥಾನಕ್ಕೆ ಸ್ಪರ್ಧಿಸಿರುವ ಕಾಂಗ್ರೆಸ್‌ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಜೀವ ಬೆದರಿಕೆ ಹಾಕಿ ಎರಡು ಮೂರು ದಿನಗಳಾದರೂ ರಾಜ್ಯ ಸರ್ಕಾರ ಆ ವ್ಯಕ್ತಿಯನ್ನು ಬಂಧಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದೆ.

Contact Your\'s Advertisement; 9902492681

ಒಬ್ಬರು ಕೇಂದ್ರದ ಮಾಜಿ ಸಚಿವರು, ಅವರ ಮಗ ಹಾಲಿ ಶಾಸಕರಾಗಿದ್ದಾರೆ.ಇಂತಹ ಜನಪ್ರತಿನಿಧಿಗಳ ಮೇಲೆ ಜೀವ ಬೆದರಿಕೆ ಹಾಕಿದರೂ ಇಲ್ಲಿಯವರಿಗೆ ಆ ವ್ಯಕ್ತಿಯನ್ನು ಬಂಧಿಸುವಲ್ಲಿ ಹಿಂದೇಟು ಹಾಕುವುದಾದರೆ, ಜನಸಾಮನ್ಯರ ಗತಿಯೇನು. ಕೂಡಲೇ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಲೇಬೇಕು.ಇಲ್ಲದಿದ್ದರೇ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ರಾಜೇಶ ಎಚ್ಚರಿಕೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here