- ಬಸವರಾಜ ಸಿನ್ನೂರ
ಶಹಾಪುರ : ಐಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಮುನಮುಟಗಿ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಕುಡಿಯುವ ನೀರಿಗೆ ಬರ ಬಂದಿದೆ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಮಾಡಿದರೂ ಸಾರ್ವಜನಿಕರಿಗೆ ಉಪಯೋಗವಾಗುತ್ತಿಲ್ಲ.
ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ಇಲ್ಲದಂತಾಗಿದೆ.ಮುಂಬರುವ ದಿನಗಳಲ್ಲಿ ಶುದ್ಧ ಕುಡಿಯುವ ನೀರು ಕೊಡದಿದ್ದರೆ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟಿಸಲಾಗುವುದು ಎಂದು ಜಿಲ್ಲಾ ದಲಿತ ಸೇನೆಯ ಸಂಚಾಲಕರಾದ ಶರಣುರಡ್ಡಿ ಹತ್ತಿಗೂಡೂರ ಎಚ್ಚರಿಕೆ ನೀಡಿದ್ದಾರೆ.
ಜನಪ್ರತಿನಿಧಿಗಳ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕ ಸಂಪೂರ್ಣವಾಗಿ ಸ್ಥಗಿತಗೊಂಡಿವೆ, ಗುತ್ತಿಗೆದಾರರು ಘಟಕ ನಿರ್ಮಾಣ ಮಾಡಿ ಕೈತೊಳೆದುಕೊಂಡಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ಶುದ್ಧ ಕುಡಿವ ನೀರಿನ ಘಟಕ ಯೋಜನೆಯ ನಿರ್ಮಾಣದಲ್ಲಿ ಕೋಟ್ಯಂತರ ರೂಪಾಯಿಗಳ ಅಕ್ರಮ ಅವ್ಯವಹಾರ ಎಸಗಿದ್ದು
ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರಾದ ಮಲ್ಲು, ಭೀಮರಾಯ,ಪರಶುರಾಮ, ಸಿದ್ದಪ್ಪ,ಮಲ್ಲಿಕಾರ್ಜುನ್, ಹೊನ್ನಯ್ಯ ಆಗ್ರಹಿಸಿದ್ದಾರೆ.