ಉಪನ್ಯಾಸಕ ಸುರೇಶ್ ಆತ್ಮಹತ್ಯೆ ಸೂಕ್ತ ಪರಿಹಾರಕ್ಕೆ ಶಿವಕುಮಾರ ಆಗ್ರಹ

0
51

ಶಹಾಬಾದ: ಮಂಡ್ಯಜಿಲ್ಲೆಯ ಮಳವಳ್ಳಿ ಸರಕಾರಿ ಪದವಿ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಅತಿಥಿ ಉಪನ್ಯಾಸಕಿ ಕೋಕಿಲಾ ಹಾಗೂ ಇತಿಹಾಸದ ಉಪನ್ಯಾಸಕ ಸುರೇಶ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರಕಾರದ ನಿಷ್ಕಾಳಜಿಯೇ ಕಾರಣ. ಕೂಡಲೇ ಸರಕಾರ ಈ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಸಂಘಟಕ ಶಿವಕುಮಾರ.ಇ.ಕೆ ಆಗ್ರಹಿಸಿದ್ದಾರೆ.

Contact Your\'s Advertisement; 9902492681

ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ನೀಡಬೇಕು ಹಾಗು ಖಾಯಂಗೊಳಿಸಲು ಸರ್ಕಾರ ಕ್ರಮತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಲೇ ಬಂದಿದ್ದೆವೆ. ಅಲ್ಲದೇ ಇತ್ತಿಚೆಗೆ ಕೋವಿಡ್-೧೯ ಸಾಂಕ್ರಾಮಿಕ ರೋಗ ನಿಯಂತ್ರಣ ಹೆಸರಿನಲ್ಲಿ ಇಡಿ ದೇಶದಾದ್ಯಂತ ಹೇರಿದ ಲಾಕ್‌ಡೌನ್ ನಿಂದಾಗಿ ಅತಿಥಿ ಉಪನ್ಯಾಸಕರ ಪರಿಸ್ಥಿತಿಯೂ ತುಂಬಾ ಗಂಭೀರವಾಯಿತು. ಹೀಗಾಗಿ ಲಾಕ್‌ಡೌನ್ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ವಿಶೇಷ ಹಣಕಾಸು ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯು ಆನ್‌ಲೈನ್ ಚಳುವಳಿಯನ್ನು ಸಂಘಟಿಸಿ ಸರಕಾರಕ್ಕೆ ಮನವಿ ಮಾಡಿಕೊಂಡಿತ್ತು.

ಒಂದು ವೇಳೆ ಸರಕಾರ ಆಗಲೇ ಎಚ್ಚೆತ್ತುಕೊಂಡು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿದ್ದರೆ ಈ ಅತಿಥಿ ಉಪನ್ಯಾಸಕರ ಎರಡು ಅಮೂಲ್ಯ ಜೀವಗಳು ಉಳಿಸಬಹುದಿತ್ತು. ಆದರೆ ಸರಕಾರದ ನಿಷ್ಕಾಳಜಿಯೇ ಇದಕ್ಕೆ ಕಾರಣವಾಗಿದೆ. ಆದ್ದರಿಂದ ಸರಕಾರ ಈಗಲಾದರೂ ಎಚ್ಚೆತ್ತುಕೊಂಡು ಈ ಕೂಡಲೇ ಅತಿಥಿ ಉಪನ್ಯಾಸಕರಿಗೆ ಲಾಕ್‌ಡೌನ್ ಹಿನ್ನಲೆಯಲ್ಲಿ ವಿಶೇಷ ಹಣಕಾಸು ಪ್ಯಾಕೇಜ್ ಬಿಡುಗಡೆ ಮಾಡಬೇಕು ಮತ್ತು ಉದ್ಯೋಗ ಭದ್ರತೆ ಕಲ್ಪಿಸಿ ಇವರನ್ನು ಖಾಯಂ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here