ಕಲಬುರಗಿ: ನಗರದಲ್ಲಿ ಇಂದು ನಗರಾಭಿವೃದ್ಧಿ ಸಚಿವ ಬಿ. ಎ. ಬಸವರಾಜ್ ಅವರು ಮಹಾ ನಗರ ಪಾಲಿಕೆ ಕಚೇರಿಗೆ ಭೇಟಿ ನೀಡಿ ಅಲ್ಲಿನ ಕೆಲಸ ಕಾರ್ಯಗಳ ಪರಿಶೀಲಿಸಿದರು. ಅಲ್ಲಿನ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದ ಅವರು ಸಮರ್ಪಕ ಕೆಲಸ ಮಾಡಬೇಕು ಎಂದು ಸೂಚಿಸಿದರು.
ನಂತರ ಮೆಹಬೂಬ್ ಗುಲ್ಶನ್ ಪಬ್ಲಿಕ್ ಉದ್ಯಾನ ವನದಲ್ಲಿ ಸಸಿ ನೆಟ್ಟು ಸಚಿವರು ನೀರು ಉಣಿಸಿದರು. ನಂತರ ಜಲಭವನದ ಕಟ್ಟಡಕ್ಕೆ ಭೇಟಿ ನೀಡಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಪನೂರ ಒಳಚರಂಡಿ ಶುದ್ಧೀಕರಣ ಘಟಕಕ್ಕೂ ಭೇಟಿ ನೀಡಿದ ಸಚಿವರು ಅಲ್ಲಿನ ಸಿವೇಜ್ ವಾಟರ್ ಕುರಿತಾಗಿನ ವಿನ್ಯಾಸ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಸವರಾಜ್ ಮತ್ತಿಮೂಡ್, ದತ್ತಾತ್ರೇಯ ಪಾಟೀಲ್ ರೇವೂರ್, ರಾಜಕುಮಾರ್ ಪಾಟೀಲ್ ತೇಲ್ಕೂರ್, ಅವಿನಾಶ್ ಜಾಧವ್ ಮಹಾನಗರ ಪಾಲಿಕೆ ಆಯುಕ್ತರಾದ ರಾಹುಲ್ ಪಾಂಡ್ವೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.