ಕಲಬುರಗಿ : ನಗರದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನಿರ್ದೇಶಕರಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ,ಸಮಾಜ ಕಲ್ಯಾಣ ಇಲಾಖೆಯ ಹಾಗೂ ಅಲ್ಪಸಂಖ್ಯಾತರ ವಸತಿ ನಿಲಯಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿರುವ b.ed ವಿದ್ಯಾರ್ಥಿಗಳ ಜುಲೈ 15 ರಿಂದ ಪರೀಕ್ಷೆ ಪ್ರಾರಂಭವಾಗಲಿದ್ದು ಇದರಲ್ಲಿ ಬಹುತೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಹಾಗೂ ಬೇರೆಯ ಜಿಲ್ಲೆಯಿಂದ ಬಂದಿರುವ ವಿದ್ಯಾರ್ಥಿಗಳು ಹೆಚ್ಚಾಗಿದ್ದು ಅದರಲ್ಲಿ ಅವರುಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ,ಸಮಾಜ ಕಲ್ಯಾಣ ಇಲಾಖೆಯ ಹಾಗೂ ಅಲ್ಪಸಂಖ್ಯಾತರ ವಸತಿ ನಿಲಯಗಳನ್ನು ಹೆಚ್ಚಾಗಿ ಅವಲಂಬಿಸಿದ್ದು ಕೂಡಲೇ ಮೂರು ಇಲಾಖೆಗಳ ವಸತಿ ನಿಲಯಗಳನ್ನು ಪ್ರಾರಂಭಿಸಲು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸುತ್ತದೆ.
ಕಲಬುರಗಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಅಟ್ಟಹಾಸ ಜಾಸ್ತಿಯಾಗುತ್ತಿದ್ದು ಇದನ್ನು ತಡೆಯಲು ಮೂರು ಇಲಾಖೆಗಳು ರಾತ್ರಿ-ಹಗಲು ಎನ್ನದೇ ಸೇವೆ ಸಲ್ಲಿಸುತ್ತಿರುವುದು ಅಭಿನಂದನಾರ್ಹ ಕೆಲಸವಾಗಿದೆ. ಬಹುತೇಕ ವಸತಿ ನಿಲಯಗಳನ್ನು ಕ್ವಾರಟೈನ್ ಕೇಂದ್ರವನ್ನಾಗಿ ಮಾಡಲಾಗಿತ್ತು ಆದ್ದರಿಂದ ಎಲ್ಲಾ ವಸತಿ ನಿಲಯಗಳಿಗೆ ಔಷಧಿಯನ್ನು ಸಿಂಪಡಿಸಿ ಸ್ವಚ್ಛಗೊಳಿಸಬೇಕು ಹಾಗೂ ಹೊಸ ಹಾಸಿಗೆ, ಹೊದಿಕೆ, ಬೆಡ್ ಕೋಡಬೇಕು ಮತ್ತು ಸ್ಯಾನಿಟೈಜರ್ ,ಮಾಸ್ಕ್, ಹಾಗೂ ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಇದಕ್ಕಾಗಿ ಈ ಸಧ್ಯ ಪರೀಕ್ಷೆ ಇರುವ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳನ್ನ ತೆರೆದು ಕೊಠಡಿಗೆ ಒಬ್ಬರಂತೆ ಅವಕಾಶ ನೀಡಿ ಊಟದ ವ್ಯವಸ್ಥೆಯನ್ನೂ ಮಾಡಬೇಕು.
ಇದರಿಂದ ದೈಹಿಕ ಅಂತ ಕಾಪಾಡಿಕೊಳ್ಳಲು ಸಹಯಾವಾಗುತ್ತದೆ. ಈ ಬಗ್ಗೆ ಇಲಾಖೆ ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳ ಸುರಕ್ಷತೆಗೆ ಹೆಚ್ಚು ಒತ್ತು ಕೊಡಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ (K.V.S) ಜಿಲ್ಲಾ ಸಂಚಾಲಕರಾದ ರಾಜೇಂದ್ರ ರಾಜವಾಳ, ಶರಣು ಕೋಲಿ , ನಾಗರಾಜ ಯಡ್ರಾಮಿ ಆಗ್ರಹಿಸಿದರು.