ಕೊಪ್ಪಳ : ರಾಜ್ಯದಲ್ಲಿ ಜೂನ್ 25 ರಂದು ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮುಂದೂಡಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಜಿಲ್ಲಾ ಘಟಕ ಆಗ್ರಹಿಸಿದೆ.
ಜಿಲ್ಲಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್, ಕ್ಯಾಂಪಸ್ ಫ್ರಂಟ್, ಜಿಲ್ಲಾ ಕಾರ್ಯದರ್ಶಿಯಾದ ಸೈಯದ್ ಅಲಿ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ಅತಿಕ್, ಅಫ್ಜಲ್, ಆವೇಜ್ ಉಪಸ್ಥಿತರಿದ್ದರು.