ಸುರಪುರ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಾಗಿ ನಗರದಲ್ಲಿ ೪ ಮೂಲ ಕೇಂದ್ರಗಳು ಹಾಗು ೨ ಉಪ ಕೇಂದ್ರಗಳನ್ನು ತೆರೆಯಲಾಗಿತ್ತು.ಈ ಕೇಂದ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರೀಕ್ಷಾ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದರು.
ನಗರದ ರಂಗಂಪೇಟೆಯ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಪ್ರೌಢ ಶಾಲೆಗೆ ತಹಸೀಲ್ದಾರ್ ನಿಂಗಣ್ಣ ಬಿರಾದಾರ್,ಡಿವೈಎಸ್ಪಿ ವೆಂಕಟೇಶ ಹುಗಿಬಂಡಿ ಹಾಗು ನಗರಸಭೆ ಪೌರಾಯುಕ್ತ ಜೀವನ್ ಕುಮಾರ ಕಟ್ಟಿಮನಿ ಭೇಟಿ ನೀಡಿ ಪರೀಕ್ಷಾ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸುವ ಜೊತೆಗೆ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಲ್ಲಿ ಹುಮ್ಮಸ್ಸು ಮೂಡಿಸಿದರು.
ಅಲ್ಲದೆ ಪರೀಕ್ಷಾ ಕೇಂದ್ರದ ಬಳಿಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳ ಪೋಷಕರು ಮತ್ತು ಸಾರ್ವಜನಿಕರಿಗೆ ಓಡಿಸುವ ಮೂಲಕ ಪರೀಕ್ಷಾ ಅಕ್ರಮಕ್ಕೆ ಅವಕಾಶವಿಲ್ಲದಂತೆ ಮುಂಜಾಗೃತೆ ವಹಿಸಲಾಯಿತು.ನಗರದ ಬಾಲಕರ ಸರಕಾರಿ ಪ್ರೌಢ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನಾ ಓಲೆಕಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.