ಕಲಬುರಗಿ: ನಗರದ ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಶುಕ್ರವಾರ ಜರುಗಿದ ಸಹಕಾರ ಇಲಾಖೆ ಹಾಗೂ ಸಹಕಾರಿಗಳಿಂದ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮದಲ್ಲಿ ರಾಜ್ಯದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರ ಸಮ್ಮುಖದಲ್ಲಿ ಸಿದ್ದಿವಿನಾಯಕ್ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ನಿರ್ದೇಶಕ ಸಂಜೀವ ಎಸ್. ಮಹಾಜನ ಅವರು ೫೦,೦೦೦ರೂ.ಗಳ ಪ್ರೋತ್ಸಾಹ ಧನದ ಚೆಕ್ನ್ನು ನೀಡಿದರು. ಈ ಸಂದರ್ಭದಲ್ಲಿ ನಿರ್ದೇಶಕ ಗಂಗಾಧರ ಬಿ. ಮುನ್ನೋಳ್ಳಿ ಇದ್ದರು.