ಕಲಬುರಗಿ: ನಗರದ ಶೆಟ್ಟಿ ಟಾಕೀಸ್ ಬಳಿ ವಾಹನವೊಂದು ನಿಯಂತ್ರಣತಪ್ಪಿದ ಪರಿಣಾಮ ಫುಟ್ಪಾತ್ನಲ್ಲಿ ನಿಂತಿದ್ದ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಬೊಲೆರೋ ವಾಹನದ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿದೆ ಎನ್ನಲಾಗಿದ್ದು, ಈ ವೇಳೆ ಅಲ್ಲಿ ನಿಂತಿದ್ದ 4 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಗೂ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಹಲವು ಬೈಕ್ಗಳು ಜಖಂಗೊಂಡಿವೆ.
ಗಾಯಗೊಂಡವರನ್ನು ಆ್ಯಂಬುಲೆನ್ಸ್ ಮುಖಾಂತರ ನಗರದ ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.