ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಕಾಂಗ್ರೆಸ್ ಮುಖಂಡರು ಸೈಕಲ್ ಮೇಲೆ ತೆರಳಿ ಡಿಸಿಗೆ ಮವನಿ

0
82

ಕಲಬುರಗಿ: ಕೇಂದ್ರ ಸರ್ಕಾರ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ಇಂದು ನಗರದ ಜಗತ್ ವೃತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರ ನೇತೃತ್ವದಲ್ಲಿ ಸೈಕಲ್ ಮೇಲೆ ತೆರಳುವ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕಾಂಗ್ರೆಸ್ ಜಿಲ್ಲಾ ಸಮಿತಿಯ ಅಧ್ಯಕ್ಷ ಜಗದೆವ ಗುತ್ತದಾರ ತನ್ನ ನಿವಾಸಿದಿಂತ ಡಿಸಿ ಕಚೇರಿಗೆ ಸೈಕಲ್ ಮೇಲೆ ತೆರಳುವ ಮೂಲಕ ಕೇಂದ್ರ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿದರು. ಈ ವೇಳೆಯಲ್ಲಿ ಪಕ್ಷದ ನಾಯಕರು ಕಾರ್ಯಕರ್ತರು ಪ್ರತಿಭಟನೆಗೆ ಸಾಥ್ ನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಕಲಬುರಗಿ ಉತ್ತರ ಮತ ಕ್ಷೇತ್ರದ ಶಾಸಕ ಕನೀಜ್ ಫಾತೀಮಾ, ಜೇವರ್ಗಿ ಕ್ಷೇತ್ರದ ಶಾಸಕ ಡಾ. ಅಜಯ ಸಿಂಗ್, ತೀಪಣ್ಣ ಕಮಕನೂರ, ಮಾಜಿ ಸಚಿವ ಶರಣ ಪ್ರಕಾಶ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್, ಮಾಜಿ ಮಹಾಪೌರರಾದ ಸಜ್ಜಾದ ಅಲಿ ಇನಾಮದಾರ, ಸೈಯದ್ ಅಹಮ್ಮದ್, ಸಾಜಿದ್ ಅಲಿ ರಂಜೋಳ್ವಿ, ಶಕೀಲ್ ಸರಡಗಿ, ಮಾಜಿ ಮಹಾನಗರ ಪಾಲಿಕೆ ಸದಸ್ಯ ಅಲೀಮ್ ಪಟೇಲ್, ಈರಣ್ಣ ಪಾಟೀಲ್ ಝಳಕಿ ಸೇರಿದಂತೆ ಮುಂತಾದವರು ಇದ್ದರು.

ಕಾಂಗ್ರೆಸ್ ಮುಖಂಡರು ಸೈಕಲ್ ಮೇಲೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮಾಜಿ ಶಾಸಕ ಬಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here