ಅಂಗವಿಕಲರು ಸರ್ಕಾರದ ಸೌಲಭ್ಯ ಪಡೆಯಲಿ: ಜಗನ್ನಾಥ ಮೂರ್ತಿ

0
42

ಶಹಾಪುರ: ಗ್ರಾಮೀಣ ಭಾಗದ ಅಂಗವಿಕಲರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಾಕಷ್ಟು ಯೋಜನೆಗಳು ಜಾರಿಗೊಳಿಸಿದೆ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜಗನ್ನಾಥ ಮೂರ್ತಿ ಹೇಳಿದರು.

ತಾಲ್ಲೂಕಿನ ರಸ್ತಾಪುರ ಗ್ರಾಮ ಪಂಚಾಯಿತಿಯಲ್ಲಿ 2019 -20 ನೇ ಸಾಲಿನ 14 ನೇ ಹಣಕಾಸು ಯೋಜನೆ ಅಡಿಯಲ್ಲಿ ವಿಕಲಚೇತನರಿಗೆ ಸಾಮಗ್ರಿಗಳು ವಿತರಿಸಿ ಮಾತನಾಡಿದರು.

Contact Your\'s Advertisement; 9902492681

 

ಅಂಗವಿಕಲರು ಜೀವನ ನಿರ್ವಹಣೆಗೆ ಪರಕೀಯರನ್ನು ಅವಲಂಬಿಸದೇ ಸ್ವಸಾಮರ್ಥ್ಯದಿಂದ ಮುಖ್ಯವಾಹಿನಿಗೆ ಬರಲು ಸರ್ಕಾರದಲ್ಲಿ ಸಾಕಷ್ಟು ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಯಶಸ್ಸು ಕಾಣಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಾಳಮ್ಮ ಗಂಡ ಗೋಪಾಲಪ್ಪ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ನಾಗಣ್ಣ ಪೂಜಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮುಲ್ಲಾ ಸಾಬ್ ಸಗರ ಎಂ.ಆರ್‌.ಡಬ್ಲ್ಯೂ ಬಾಬು ಹಾಗೂ ಇತರರು ಹಾಜರಿದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here