ನವ ದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡ ಹಿನ್ನೆಲೆ ಕಾಂಗ್ರೆಸ್ ನಾಯಕರು ಸಾಲುಸಾಲಾಗಿ ರಾಜೀನಾಮೆ ನೀಡಿ ಪಕ್ಷದ ಮುಖಂಡರನ್ನು ಇಕ್ಕಟಿಗೆ ಸಿಲುಕಿಸಿದ್ದಾರೆ.
ಕರ್ನಾಟಕದಲ್ಲಿ ಎಚ್.ಕೆ ಪಾಟೀಲ ಅವರು ತಮ್ಮ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರ ಬೆನ್ನಲ್ಲೇ ಉತ್ತರಪ್ರದೇಶದ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದು, ಒಡಿಶಾ ಪ್ರದೇಶ್ ಕಾಂಗ್ರೆಸ್ ಕಮೀಟಿ ಮುಖ್ಯಸ್ಥ ನಿರಂಜನ್ ಪಟ್ನಾಯಕ್ ಕೂಡ ರಾಜೀನಾಮೆ ಸಲ್ಲಿಸಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.
ಹೌದು ದೇಶದಲ್ಲಿ 2019ರ ಲೋಕ ಸಮರದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಿರೋ ಕಾರಣ ಸಾಲು ಸಾಲಾಗಿ ರಾಜೀನಾಮೆ ನೀಡಲಾಗುತ್ತಿದೆ.