ಶಹಾಪುರ: ನಿರಾಶ್ರಿತರು ಮುಂದೆ ಬಂದು ಸರಕಾರದ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮವಾದ ಬದುಕು ರೂಪಿಸಿಕೊಳ್ಳಬೇಕು ಎಂದು ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.
ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರ ಕಟ್ಟಡ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಈ ಭಾಗದಲ್ಲಿರುವ ನಿರಾಶ್ರಿತರನ್ನು ಗುರುತಿಸಿ ಮತ್ತಷ್ಟು ಸೌಲಭ್ಯಗಳನ್ನು ನೀಡುವ ಕೆಲಸ ಬಿಜೆಪಿ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ಈ ನಿರಾಶ್ರಿತರ ಕೇಂದ್ರ ನಿಗದಿತ ಸಮಯದೊಳಗೆ ಅಚ್ಚುಕಟ್ಟಾಗಿ ಸರ್ಕಾರದ ಆದೇಶದಂತೆ ಬಹುಬೇಗನೆ ನಿರ್ಮಿಸಿ ನಿರಾಶ್ರಿತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ತಾಕಿತು ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಷಣ್ಮುಖಪ್ಪ ಕಕ್ಕೇರಿ,ಯುವ ಮುಖಂಡರಾದ ನಿಜಗುಣ ದೋರನಹಳ್ಳಿ,ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಚನ್ನಬಸಪ್ಪ, ತಹಸೀಲ್ದಾರರಾದ ಜಗನ್ನಾಥ ರೆಡ್ಡಿ,ತಾಲ್ಲೂಕು ಪಂಚಾಯಿತಿ ಇಒ ಜಗನ್ನಾಥ ಮೂರ್ತಿ, ಬಸವರಾಜ ಆಂದೇಲಿ, ಯಾದಗಿರಿಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಚಂಡ್ರಕಿ,ನಿರ್ಮಿತಿ ಕೇಂದ್ರ ಅಧಿಕಾರಿ ಕಿರಣ್ ಕುಮಾರ್,ಹಾಗೂ ಇನ್ನಿತರರು ಉಪಸ್ಥಿತರಿದ್ದರು.