ಕಲಬುರಗಿ: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸಾರ್ವಜನಿಕರಿಗೆ ಆರೋಗ್ಯ ಕಾರ್ಡ್ ವಿತರಣಾ ಶಿಬಿರ ಆಯೋಜಿಸುವ ಮೂಲಕ “ಆರೋಗ್ಯ ಕಾರ್ಡ” ವಿತರಿಸುವ ಕಾರ್ಯಕ್ಕೆ ಶುಕ್ರವಾರ ಕಲಬುರಗಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಶಂಕರ್ ವಣಿಕ್ಯಾಳ್ ಅವರು ಸ್ವಯಂ ಆರೋಗ್ಯ ಕಾರ್ಡ ಪಡೆಯುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆ ಬಡವರಿಗೆ ತುಂಬಾ ಉಪಯೋಗವಾಗಿದ್ದು, ಅನೇಕ ಮಾರಣಾಂತಿಕ ಕಾಯಿಲೆಗಳಿಗೆ ಇಲ್ಲಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯನಿಗೆ ವರ್ಷಕ್ಕೆ 5 ಲಕ್ಷ ರೂ.ವರೆಗೆ ಹಾಗೂ ಎಪಿಎಲ್ ಕುಟಂಬದ ಪ್ರತಿ ಸದಸ್ಯನಿಗೆ 1.5 ಲಕ್ಷ ರೂ. ವರೆಗೆ ನಿಗದಿತ ಆಸ್ಪತ್ರೆಗಳಲ್ಲಿ ಉಚಿತವಾಗಿ ಆರೋಗ್ಯ ಸೇವೆ ಇದರಲ್ಲಿ ನೀಡಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಆರೋಗ್ಯ ಕಾರ್ಡ ಪಡೆಯುವುದರ ಇದರ ಸದುಪಯೋಗ ಪಡೆಯಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೇವಾ ಸಿಂಧು ಜಿಲ್ಲಾ ಯೋಜನಾ ವ್ಯವಸ್ಥಾಪಕ ಅರವಿಂದ ಬಾಡಗಿ ಹಾಗೂ ಸಾಮಾನ್ಯ ಸೇವಾ ಕೇಂದ್ರದ ಸಿಬ್ಬಂದಿ ದಿನೇಶ ಕಟ್ಟಿಮನಿ ಅವರು ಉಪಸ್ಥಿತರಿದ್ದರು.
ಕಲಬುರಗಿ ಜಿಲ್ಲೆಯಲ್ಲಿ (ಈವರೆಗೆ) ದಿನಾಂಕ: 08-07-2020 ರವರೆಗೆ ಆಯುμÁ್ಮನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ 289 ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ 1,61,435 ಕಾರ್ಡ್ಗಳನ್ನು ವಿತರಿಸಲಾಗಿದೆ. ತಾಲೂಕುವಾರು ವಿವರ ಇಂತಿದೆ. ಅಫಜಲಫೂರ-22467, ಆಳಂದ-16289, ಚಿಂಚೋಳಿ 19895, ಚಿತ್ತಾಪೂರ-20426, ಜೇವರ್ಗಿ-4410, ಕಲಬುರಗಿ-67763, ಸೇಡಂ-10185 ಸೇರಿದಂತೆ ಒಟ್ಟು 1,61,435 ಕಾರ್ಡ್ಗಳನ್ನು ವಿತರಿಸಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಆರೋಗ್ಯ ಕಾರ್ಯಕ್ರಮದ ಆಯುμÁ್ಮನ್ ಭಾರತ್-ಆರೋಗ್ಯ ಕರ್ನಾಟಕ(ಂಃ-ಂಖಏ) ಯೋಜನೆಯು 2018 ಅಕ್ಟೋಬರ್ ಮಾಹೆಯಿಂದ ಜಾರಿಗೆ ಬಂದಿದೆ. ಈ ಯೋಜನೆಯಡಿ ಬಿ.ಪಿ.ಎಲ್.ಕುಟುಂಬಗಳಿಗೆ 1 ವರ್ಷಕ್ಕೆ ಪ್ರತಿಯೊಬ್ಬರು 5 ಲಕ್ಷ ರೂ. ಗಳವರೆಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ. ಅದೇ ರೀತಿ ಎ.ಪಿ.ಎಲ್. ಕುಟುಂಬಗಳು ಪ್ರತಿಯೊಬ್ಬರು ಒಂದು ವರ್ಷದ ಅವಧಿಯಲ್ಲಿ ಸರ್ಕಾರ ನಿಗದಿಪಡಿಸಿದ ಆಸ್ಪತ್ರೆಗಳಲ್ಲಿ ವಾರ್ಷಿಕ ಪ್ರತಿಯೊಬ್ಬರು 1.50 ಲಕ್ಷ ರೂ. ಗಳವರೆಗೆ ಸರ್ಕಾರಿ ಹಾಗೂ ನೊಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಆರೋಗ್ಯ ಸೇವೆಯನ್ನು ಪಡೆಯಬಹುದಾಗಿದೆ.
ಈ ಯೋಜನೆಯಡಿ ಸೌಲಭ್ಯ ಪಡೆಯಲು ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳು ಪಡಿತರ ಚೀಟಿ ಮತ್ತು ಆಧಾರ ಕಾರ್ಡ್ ಅವಶ್ಯಕವಾಗಿದೆ. ಇದಲ್ಲದೇ ಎ.ಪಿ.ಎಲ್ ಕಾರ್ಡ ಹೊಂದಿರುವ ಫಲಾನುಭವಿಗಳು ಆಧಾರ ಕಾರ್ಡ ಮಾತ್ರ ಅವಶ್ಯಕವಾಗಿರುತ್ತದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ (ಂಃ-ಂಖಏ) ಯೋಜನೆಯಡಿ ದೃಢಪಟ್ಟ ಕೋವಿಡ್-19 ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹಾಗೂ ನೊಂದಾಯಿತ ಖಾಸಗಿ ನಸಿರ್ಂಗ್ ಹೋಮ್/ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆಯು ಲಭ್ಯವಿರುತ್ತದೆ.
ಜಿಲ್ಲೆಯಲ್ಲಿ 289 ಸಾಮಾನ್ಯ ಸೇವಾ ಸಿಂಧು ಕೇಂದ್ರಗಳು (ಅಫಜಲಫೂರ-37, ಆಳಂದ-30, ಚಿಂಚೋಳಿ-30, ಚಿತ್ತಾಪೂರ-41, ಜೇವರ್ಗಿ-18, ಕಲಬುರಗಿ-113, ಸೇಡಂ-20), ಜಿಲ್ಲಾಸ್ಪತ್ರೆ ಹಾಗೂ ಎಲ್ಲಾ ತಾಲ್ಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ನೊಂದಾಯಿಸಿಕೊಂಡು ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ಗಳನ್ನು ನೀಡಲಾಗುತ್ತಿದೆ. ಕಾರ್ಡ್ ಪಡೆಯಲು ಬರುವ ಸಾರ್ವಜಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು. ಬಯೋಮೆಟ್ರಿಕ್ ಪರೀಕ್ಷೆ ಮುನ್ನ ಮತ್ತು ನಂತರ ಸ್ಯಾನಿಟೈಸರ್ದಿಂದ ಕೈಗಳನ್ನು ಶುಚಿತ್ವಗೊಳಿಸುವುದು ಕಡ್ಡಾಯವಾಗಿದೆ.
ಕೋವಿಡ್-19ರ ಅವಧಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ (ನಿಗದಿತ ಕೋವಿಡ್ ಆಸ್ಪತ್ರೆ) ಹಾಗೂ ಂಃ-ಂಖಏ ಯೋಜನೆಯಡಿ ನೊಂದಾಯಿತ ಖಾಸಗಿ ಆಸ್ಪತ್ರೆ/ನಸಿರ್ಂಗ್ ಹೋಮ್ಗಳಲ್ಲಿಯೂ ಕೂಡ ಕೋವಿಡ್ ದೃಢಪಟ್ಟ ರೋಗಿಗೆ ಉಚಿತ ಚಿಕಿತ್ಸೆ ಲಭ್ಯವಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಂಃ-ಂಖಏ ಕಾರ್ಡ್ ಗಳನ್ನು ತ್ವರಿತವಾಗಿ ನೊಂದಾಯಿಸಿ ಪಡೆದುಕೊಳ್ಳಲು ಕೋರಿದೆ.
ಈ ಯೋಜನೆಯಡಿ ನಾನ್ ಕೋವಿಡ್ ರೋಗಿಗಳಿಗೆ 1650 ಖಾಯಿಲೆಗಳಿಗೆ ಚಿಕಿತ್ಸಾ ವಿಧಾನಗಳು ಲಭ್ಯವಿದ್ದು, ಅದರಲ್ಲಿ ಸಾಮಾನ್ಯ ದ್ವಿತೀಯ ಹಂತದ 291, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು ಹಾಗೂ 169 ತುರ್ತು ಚಿಕಿತ್ಸಾ ವಿಧಾನಗಳು, ನೊಂದಾಯಿತ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ. 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫೆರಲ್ ಚೀಟಿ ಇಲ್ಲದೆ ನೇರವಾಗಿ ನೊಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೇವಾ ಸಿಂಧು ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಅರವಿಂದ ಬಾಡಗಿ ಇವರನ್ನು ಮೊಬೈಲ್ ಸಂಖ್ಯೆ 9379049999ಗೆ ಸಂಪರ್ಕಿಸಲು ಕೋರಲಾಗಿದೆ.
Health chadrd