ಕಲಬುರಗಿ: ಚಿತ್ತಾಪುರ ಪಟ್ಟಣದ ಬಿಇಓ ಕಚೇರಿ ಸಿಬ್ಬಂದಿ ಓರ್ವರಿಗೆ ಕೊರೊನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.
ಕಚೇರಿಯ ಸಿಬ್ಬಂದಿಯೊಬ್ಬರು ಬೈಕ್ ಅಪಘಾತದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದು, ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಸೋಂಕು ಕಂಡು ಬಂದ ಹಿನ್ನಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಇಲಾಖೆಗೆ ಸ್ಯಾನಿಟೈಸರ್ ಮಾಡಿ, ಸೀಲ್ ಡೌನ್ ಮಾಡಲಾಗಿದೆ.
ಕಚೇರಿಯ ಶಿಕ್ಷಣಾಧಿಕಾರಿಗಳು ಒಳಗೊಂಡು ಎಲ್ಲಾ ಸಿಬ್ಬಂದಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಾಲೂಕು ತಹಶೀಲ್ದಾರ್ ಉಮಾಕಾಂತ ಹಳ್ಳೆ ತಿಳಿಸಿದ್ದಾರೆ.