ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ವರ್ಗಾವಣೆಗೆ ಒತ್ತಾಯ

0
121

ಸುರಪುರ: ಕೃಷಿ ಇಲಾಖೆಯಲ್ಲಿ ರೈತರಿಗೆ ಬರುವ ಸರಕಾರದ ಯಾವ ಯೊಜನೆಗಳು ಸರಿಯಾಗಿ ತಲುಪಿಸದೆ ರೈತರಿಗೆ ಮೋಸ ಮಾಡಲಾಗುತ್ತಿದೆ,ಆದ್ದರಿಂದ ಕೂಡಲೆ ಯಾದಗಿರಿ ಜಿಲ್ಲಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೇವಿಕಾರವರನ್ನು ವರ್ಗಾವಣೆಗೊಳಿಸುವಂತೆ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿದರು.

ನಗರದ ತಿಮ್ಮಾಪುರದಲ್ಲಿರುವ ರೈತ ಸಂಪರ್ಕ ಕೇಂದ್ರದ ಬಳಿಯಿರುವ ಕನಕ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ,ಸರಕಾರ ರೈತರಿಗೆ ಜಮೀನುಗಳಲ್ಲಿ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಅನುದಾನ ನೀಡುತ್ತಿದೆ.ಆದರೆ ಅನುದಾನ ರೈತರಿಗೆ ತಲುಪಿಸುವಲ್ಲಿ ವಿಫಲವಾಗಿದೆ.ಅಲ್ಲದೆ ರೈತರಿಗೆ ಸಬ್ಸಿಡಿ ದರದಲ್ಲಿ ನೀಡಬೇಕಾದ ಉಪಕರಣಗಳನ್ನು ನೀಡದೆ ರೈತರಿಗೆ ವಂಚಿಸಲಾಗುತ್ತಿದೆ.ಅಲ್ಲದೆ ವಾಟರ್ ಸೆಡ್ ಯೋಜನೆ ಸಂಪೂರ್ಣ ಬೋಗಸಾಗಿದ್ದು ಕೂಡಲೆ ಇದನ್ನು ತನಿಖೆಗೊಳಪಡಿಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ರೈತರಿಗಾಗಿ ಗ್ರಾಮೀಣ ಉದ್ಯೋಗ ಖಾತ್ರಿ ಅಡಿಯಲ್ಲಿ ಅನೇಕ ಯೋಜನೆಗಳನ್ನು ಸರಕಾರ ನೀಡಿದ್ದು ಅವುಗಳನ್ನು ರೈತರಿಗೆ ತಲುಪಿಸುವಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ,ಇದನ್ನು ಖಂಡಿಸಿ ಜಿಲ್ಲಾ ಸಹಾಯಕ ನಿರ್ದೇಶಕಿ ದೇವಿಕಾ ಮೇಡಂ ಅವರಿಗೆ ಅನೇಕಬಾರಿ ಮನವಿ ಮಾಡಿದರು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ್ದಾರೆ.ಆದ್ದರಿಂದ ಕೂಡಲೆ ಇವರನ್ನು ವರ್ಗಾವಣೆ ಮಾಡಿ ಬೇರೆಯವರನ್ನು ನೇಮಕ ಮಾಡಬೇಕು ಇಲ್ಲವಾದರೆ ಜಿಲ್ಲಾ ಕೇಂದ್ರದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿ,ಕೃಷಿ ಆಯುಕ್ತರಿಗೆ ಬರೆದ ಮನವಿಯನ್ನು ಉಪ ತಹಸೀಲ್ದಾರ ನಾಸೀರ್ ಅಹ್ಮದರ ಮೂಲಕ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಗೋಪಾಲ ಬಾಗಲಕೋಟೆ,ಮಾನಯ್ಯ ದೊರೆ,ಕೃಷ್ಣಾ ದಿವಾಕರ,ಕೇಶಣ್ಣ ದೊರೆ,ಬಸವರಾಜ ಕವಡಿಮಟ್ಟಿ,ದೇವಪ್ಪ ದೇವರಮನಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here