ಪರೀಕ್ಷೆಗಳ ರದ್ಧತಿಗೆ ಆಗ್ರಹಿಸಿ ಎಐಡಿಎಸ್‌ಒ ಪ್ರತಿಭಟನೆ

0
48

ವಾಡಿ: ಮಹಾಮಾರಿ ಕೊರೊನಾ ಭೀತಿಯ ಮಧ್ಯೆ ಪ್ರಾಣ ಸಂಕಟ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ಅಂತಿಮ ವ?ದ ಪದವಿ, ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರಿಂಗ್ ಪರೀಕ್ಷೆಗಳನ್ನು ನಡೆಸುವುದು ಸರಿಯಲ್ಲ. ಕೂಡಲೇ ಈ ಎಲ್ಲಾ ಪದವಿ ಪರೀಕ್ಷೆಗಳನ್ನು ರದ್ಧುಪಡಿಸಬೇಕು ಎಂದು ಆಲ್ ಇಂಡಿಯಾ ಡೆಮಾಕ್ರೇಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಕಾರ್ಯಕರ್ತರು ಆಗ್ರಹಿಸಿದರು.

ಪಟ್ಟಣದ ಕಾಮ್ರೇಡ್ ಶ್ರೀನಿವಾಸ ಗುಡಿ ವೃತ್ತದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಉಪ ತಹಶೀಲ್ದಾರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿರುವ ವಿದ್ಯಾರ್ಥಿ ನಾಯಕರು, ಕೊರೊನಾ ಸೋಂಕು ಏರುಗತಿಯಲ್ಲಿದೆ. ಸುರಕ್ಷತೆಗೆ ಸರಕಾರ ಯಾವೂದೇ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿರುವುದನ್ನು ಕಾಣುತ್ತಿದ್ದೇವೆ. ಇಂತಹ ಭಯಾನಕ ಪರಸ್ಥಿತಿಯಲ್ಲಿ ಸರಕಾರ ಪದವಿ ಪರೀಕ್ಷೆಗಳನ್ನು ನಡೆಸಲು ಮತ್ತು ಆನ್‌ಲೈನ್ ಶಿಕ್ಷಣ ಆರಂಭಿಸಲು ಆದೇಶಿಸಿದೆ.

Contact Your\'s Advertisement; 9902492681

ಕೂಡಲೇ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಏಕರೂಪವಾದ, ತಾರತಮ್ಯವಿಲ್ಲದ ಮತ್ತು ಉತ್ತಮಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸುವ ಒಂದು ವೈಜ್ಞಾನಿಕ ಮೌಲ್ಯಮಾಪನ ಪ್ರಕ್ರಿಯೆ ಸಿದ್ಧಪಡಿಸಬೇಕು. ಉದ್ಯೋಗ ಭದ್ರತೆಯನ್ನು ಖಾತ್ರಿಪಡಿಸಬೇಕು. ಎಲ್ಲ ಶೈಕ್ಷಣಿಕ ಸಾಲವನ್ನು ಮನ್ನಾ ಮಾಡಬೇಕು. ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಎಐಡಿಎಸ್‌ಒ ನಗರ ಸಮಿತಿ ಅಧ್ಯಕ್ಷ ಗೌತಮ ಪರತೂರಕರ, ಕಾರ್ಯದರ್ಶಿ ವೆಂಕಟೇಶ ದೇವದುರ್ಗಾ, ಅರುಣಕುಮಾರ ಹಿರೆಬಾನರ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here