ಕಲಬುರಗಿ: ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ 13ರಿಂದ ಲಾಕ್ ಡೌನ್ 20ರವರೆಗೆ ಜಾರಿಯಾಗಿತ್ತು.
ಈ ಮಧ್ಯೆ ಜಿಲ್ಲಾಧಿಕಾರಿ ಬಿ.ಶರತ್ ಅವರು ಇಂದು ಮತ್ತೊಂದು ಆದೇಶ ಹೊರಡಿಸಿ 27ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಜನತೆಯ ಆರೋಗ್ಯದ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಈ ಮುಂಚೆ ಅನುಮತಿಸಿದ ಅಂಗಡಿಗಳು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ತೆರೆದಿರತಕ್ಕದ್ದು ಎಂದು ಆದೇಶ ಹೊರಡಿಸಿದ್ದಾರೆ.