ಡ್ರೋನ್ ಪ್ರತ್ತಾಪನಿಂದ ಮತ್ತೊಂದು ಎಡವಟ್ಟು: ಬಂಧನಕ್ಕೆ ಪೊಲೀಸರ ಹುಡುಕಾಟ

0
94

ಬೆಂಗಳೂರು: ತನ್ನನ್ನು ತಾನು ಡ್ರೋನ್ ತಯಾರಿಸಿದ್ದಾಗಿ ಸುಳ್ಳು ಹೇಳಿಕೊಂಡು ಈಗ ಸಿಕ್ಕಿಬಿದ್ದಿರುವ ಪ್ರತಾಪ ಈಗ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾನೆ. ಈ ಬಾರಿ ಪ್ರಕರಣ ದಾಖಲಾಗಿರುವುದು ಡ್ರೋನ್ ವಿಚಾರಕ್ಕೆ ಅಲ್ಲ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಕಾರಣ. ಹೀಗಾಗಿ ಪ್ರತಾಪನ ವಿರುದ್ಧ ಎಫ್ ಐಆರ್ ದಾಖಲಿಸಿರುವ ಪೊಲೀಸರು ಪ್ರತಾಪನ ಬಂಧನಕ್ಕೆ ವಿಶೇಷ ತಂಡವೊಂದನ್ನು ರಚಿಸಿ, ಹುಡುಕಾಟ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

15ರಂದು ಪ್ರತಾಪ ಹೈದರಾಬಾದ್ ನಿಂದ ಬೆಂಗಳೂರಿಗೆ ಬಂದಿದ್ದು,  ಹೊರ ರಾಜ್ಯದಿಂದ ಬಂದ ತಲಘಟ್ಟಪುರದ ಅಪಾರ್ಟ್ ಮೆಂಟ್ ವೊಂದರಲ್ಲಿ 14 ದಿನ ಹೋಂ ಕ್ವಾರಂಟೈನ್ ಆಗಬೇಕಾಗಿತ್ತು, ಆದರೆ ಮರುದಿವಸ ನಿಯಮ ಉಲ್ಲಂಘಿಸಿ ಚಾನೆಲ್ ಒಂದರ ಸಂದರ್ಶನದಲ್ಲಿ ಪಾಲ್ಗೊಂಡಿದ್ದ ಕಾರಣ ಬಿಬಿಎಂಪಿ ಅಧಿಕಾರಿಗಳು ತಲಘಟ್ಟಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Contact Your\'s Advertisement; 9902492681

ಪ್ರತಾಪ ಮೊಬೈಲ್ ಸ್ವಿಚ್ ಆಫ್ ಎಂದು ಬರುತ್ತಿದ್ದು, ಆತನಿಗೆ ಹೋಂ ಕ್ವಾರಂಟೈನ್ ಮಾಡಿದ ಅಪಾರ್ಟ್ ಮೆಂಟ್ ಗೆ ಭೇಟಿ ನೀಡಿದಾಗಲೂ ಆತ ಅಲ್ಲೂ ಸಹ ಪತ್ತೆಯಾಗಿರಲಿಲ್ಲ. ಸದ್ಯ ಮಂಡ್ಯ ಅಥವಾ ಚಿಕ್ಕಮಗಳೂರಿನಲ್ಲಿ ಇದ್ದಾನೆ ಎನ್ನಲಾಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here