ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ: ಬೇಡಿಕೆ ಈಡೇರಿಸಲು ಒತ್ತಾಯ

0
54

ಸುರಪುರ: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಸುರಪುರ ತಾಲೂಕು ಆಶಾ ಕಾರ್ಯಕರ್ತೆಯರು ತಾಲೂಕು ಪಂಚಾಯತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ತಾಲೂಕು ಪಂಚಾಯತಿ ಮುಂದೆ ಜಮಾಯಿಸಿದ ಅನೇಕ ಜನ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು.ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಪುಷ್ಪಲತಾ ಮಾತನಾಡಿ,ನಾವು ಕಳೆದ ೧೧ ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಹಗಲಿರಳು ಜೀವದ ಹಂಗು ತೊರೆದು ಕೆಲಸ ಮಾಡುವ ನಮಗೆ ಕನಿಷ್ಟ ೧೨ ಸಾವಿರ ಸಂಬಳ ನೀಡಬೇಕು, ಕೋವಿಡ್ ಸೊಂಕಿತ ಆಶಾ ಕಾರ್ಯಕರ್ತೆಯರಿಗೆ ಸರಕಾರವೇ ವೆಚ್ಚ ಭರಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಹಾಗು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಸ್ಯಾನಿಟೈಜರ್ ಹಾಗು ಫೀವರ್ ಚೆಕ್ಕಿಂಗ್ ಮಸಿನ್ ನೀಡಬೇಕೆಂದು ವಿನಂತಿಸಿದರು ಸರಕಾರ ನಮ್ಮ ಬೇಡಿಕೆಗಳಿಗೆ ಬೆಲೆ ನೀಡುತ್ತಿಲ್ಲ,ಸರಕಾರ ಕೂಡಲೆ ನಮ್ಮ ಬೇಡಿಕೆಗಳ ನ್ಯಾಯ ವದಗಿಸಬೇಕೆಂದು ಆಗ್ರಹಿಸಿದರು.

Contact Your\'s Advertisement; 9902492681

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ವಿಶ್ವನಾಥ ಯಾದಗೀರಕರ್ ಮೂಲಕ ಸಲ್ಲಿಸಿದರು.ಮನವಿ ಸ್ವೀಕರಿಸಿದ ಎಡಿ ವಿಶ್ವನಾಥ ಅವರು ನಿಮ್ಮ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತರಲು ಮನವಿಯನ್ನು ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಸರಕಾರಕ್ಕೆ ಕಳುಹಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಾದ ಶಾಂತವ್ವ ರಾಜೇಶ್ವರಿ ಸೌಂದರ್ಯ ಮರೆವ್ವ ಮಂಜುಳಾ ಲಕ್ಷ್ಮೀಬಾಯಿ ಚೈತನ್ಯ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here