ಮಂಡಳಿಗೆ ನೇಮಕ: ಗುತ್ತೇದಾರ ಅಭಿನಂದನೆ

0
557

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರನ್ನಾಗಿ ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಆಯ್ಕೆಯಾಗಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದನೆ ತಿಳಿಸಿದ್ದಾರೆ.

ದತ್ತಾತ್ರೇಯ ಪಾಟೀಲ ರೇವೂರ ಮತ್ತು ರಾಜಕುಮಾರ ಪಾಟೀಲ ಇಬ್ಬರೂ ಯುವಕರಾಗಿದ್ದು ಅತ್ಯಂತ ಕ್ರಿಯಾಶೀಲರಾಗಿದ್ದಾರೆ ಇವರ ನೇತೃತ್ವದಲ್ಲಿ ಎರಡು ಮಂಡಳಿಗಳು ಹೊಸ ದಿಕ್ಕು ಪಡೆದು ಅಭಿವೃದ್ಧಿ ಹೊಂದಲಿ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ರಾಜ್ಯದಲ್ಲಿ ಪಕ್ಷ ತಮಗೆ ನೀಡುವ ಯಾವ ಜವಾಬ್ದಾರಿಯನ್ನು ಹೊರಲು ಸಿದ್ಧನಿದ್ದೇನೆ. ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗಾಗಿ ಶ್ರಮಿಸುತ್ತೇನೆ. ಆಳಂದ ಕ್ಷೇತ್ರದಲ್ಲಿ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಲು ಯೋಜನೆ ರೂಪಿಸಿದ್ದೇನೆ.  ಭಾರತೀಯ ಜನತಾ ಪಕ್ಷ ಶಿಸ್ತಿನ ಪಕ್ಷವಾಗಿದ್ದು ಅಲ್ಲಿ ಕಾರ್ಯಕರ್ತರಿಂದ ನಾಯಕರವರೆಗೆ ಶಿಸ್ತು ಕಲಿಸಲಾಗುತ್ತದೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಹೈಕಮಾಂಡ್ ಯಾವತ್ತೂ ಕೈ ಬಿಡುವುದಿಲ್ಲ ಎನ್ನುವುದಕ್ಕೆ ಇತ್ತಿಚೀಗೆ ರಾಜ್ಯಸಭೆ ಮತ್ತು ವಿಧಾನ ಪರಿಷತಗೆ ಆಯ್ಕೆಯಾದ ಅಭ್ಯರ್ಥಿಗಳೇ ನಿದರ್ಶನ ಎಂದು ತಿಳಿಸಿದ್ದಾರೆ.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here