ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ವಿವಿಧ ಅಭಿವೃದ್ಧಿ ಮಂಡಳಿಗೆ 24 ಶಾಸಕರಿಗೆ ನೂತನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದೆ.
ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಶಾಸಕರಾದ ದತ್ತಾತ್ರೇಯ ಸಿ ಪಾಟೀಲ್ ರೇವೂರ ಅವರಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಿದ್ದು, ಸೇಡಂ ಕ್ಷೇತ್ರದ ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ್ ಅವರಿಗೆ ಈಶಾನ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿದ್ದಾರೆ.
ಅದೇ ರೀತಿ ಸುರುಪುರ ಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ್ ಅವರಿಗೆ ಕರ್ನಾಟಕ ನೀರು ಸರಬರಾಜ ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ನೇಮಕ ಮಾಡಿ ಮೂವರು ಶಾಸಕರಿಗೆ ಕಲ್ಯಾಣ ಕರ್ನಾಟಕದ ವಿವಿಧ ಮಂಡಳಿಗೆ ನೇಮಕ ಮಾಡಲಾಗಿದೆ. ಶಾಸಕರ ನೇಮಕಕ್ಕೆ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿ ಸಿಎಂಗೆ ಅಭಿನಂದನೆ ಸಲ್ಲಿಸಿದ್ದಾರೆ.