ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಜೂನ್ 2ರಂದು

1
745

ಕಲಬುರಗಿ: ಜಿಲ್ಲಾ ಗಾಣಿಗ ನೌಕರರ ಕಲ್ಯಾಣ ಸಂಘದ ವತಿಯಿಂದ ಎಸ್.ಎಸ್.ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ-2019 ಕಾರ್ಯಕ್ರಮವನ್ನು ಜೂನ್ 2 ರಂದು (ಭಾನುವಾರ) ಬೆಳಗ್ಗೆ 10 ಗಂಟೆಗೆ ನಗರದ ಸಿದ್ಧೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗನಗೌಡ ಪಾಟೀಲ ಕಲ್ಲೂರ ತಿಳಿಸಿದ್ದಾರೆ.


ಗಾಣಿಗ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುವುದು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಸಮಾಜದ ವತಿಯಿಂದಲೂ ಇಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಸಮಾಜದ ಪರವಾಗಿ ಅಭಿನಂದನೆ ಸಲ್ಲಿಸುವೆ.
-ಬಿ.ಎಂ. ಪಾಟೀಲ ಕಲ್ಲೂರ, ಕಲಬುರಗಿ

ಬೀದರ್ ಜಿಲ್ಲೆಯ ಆಳೂರು ಹಾಗೂ ಚಳಕಾಪುರ ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಗದ್ಗುರು ತೋಂಟದಾರ್ಯ ಮಠ ಗದಗ ಹಾಗೂ ನವದೆಹಲಿಯ ಮಹಾಂತ ದೇವರು ನೇತೃತ್ವ ವಹಿಸಲಿದ್ದಾರೆ. ಮಾಜಿ ಸಚಿವ ಲಕ್ಷ್ಮಣ ಸವದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ವಿಜಯಪುರ ಜಿಪಂ ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ, ಮಾಜಿಒ ಶಾಸಕ ರಮೇಶ ಭೂಸನೂರ, ಅಖಿಲ ಭಾರತ ಗಾಣಿಗ ಸಂಘದ ಅಧ್ಯಕ್ಷ ಗುರಣ್ಣ ಜಿ. ಗೋಡಿ, ರಾಜ್ಯಾಧ್ಯಕ್ಷ ಆರ್.ಜಿ. ಪಾಟೀಲ ನಡೆಸಿಕೊಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಜಿಲ್ಲಾ ಗಾಣಿಗ ಸಮಾಜದ ಅಧ್ಯಕ್ಷ ಅಪ್ಪಾರಾವ ಪಾಟೀಲ, ಯಾದಗಿರಿ ಜಿಲ್ಲಾ ಗಾಣಿಗ ನೌಕರರ ಸಂಘದ ಅಧ್ಯಕ್ಷ ಮಡಿವಾಳಪ್ಪ ಪಾಟೀಲ, ವಿಜಯಪುರ ಜಿಲ್ಲಾಧ್ಯಕ್ಷ ಮಲ್ಕಣ್ಣ ಎಸ್. ಮೊಸಲಗಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಸಿದ್ರಾಮಪ್ಪ ಪೊಲೀಸ್ ಪಾಟೀಲ ಅವರು ಸಂಗೀತ ಸೇವೆ ನಡೆಸಿಕೊಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here