ಕಲಬುರಗಿ: ಜಿಲ್ಲೆಯಲ್ಲಿ ಕೊರೋನಾ ವೈರಸ್ (ಕೋವಿಡ್-19) ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿರುವ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಬಗ್ಗೆ ಸಾರ್ವಜನಿಕರು ಅನಗತ್ಯ ಗೊಂದಲಕ್ಕೊಳಗಾಗದೆ ಈಗಾಗಲೆ ಸ್ಥಾಪಿಸಿರುವ 24 ಗಂಟೆಗಳ ಸಹಾಯವಾಣಿ ಸಂಖ್ಯೆ: ಸಂಖ್ಯೆ 08472-278604, 278648, 278698, 278677 ಹಾಗೂ ಟೋಲ್ ಫ್ರಿ ನಂಬರ್ 1047ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಸಾರ್ವಜನಿಕರು ಕೇವಲ ಐ.ಸಿ.ಯೂ. ಬೆಡ್ಗಳನ್ನು ಮಾತ್ರ ಗಣನೆಗೆ ತೆಗೆದುಕೊಂಡು ಅನಗತ್ಯ ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಕೊರೋನಾ ಸೊಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ/ ಲಕ್ಷಣಗಳನ್ವಯ ವೈದ್ಯರು ಸದರಿ ರೋಗಿಗೆ ಐ.ಸಿ.ಯು. ವಾರ್ಡ್, ಹೆಚ್.ಡಿ.ಯು. (HDU-High Dependency Unit/ Semi ICU) ಅಥವಾ ಸಾಮಾನ್ಯ ವಾರ್ಡ್ಗಳಲ್ಲಿ ಆಮ್ಲಜನಕ ಲಭ್ಯತೆ ಅನುಸಾರ ಚಿಕಿತ್ಸೆ ನೀಡಲು ನಿರ್ಧರಿಸುವ ಕರ್ತವ್ಯವುಳ್ಳವರಾಗಿದ್ದಾರೆ.
ಸಾರ್ವಜನಿಕರು ಯಾವುದೇ ಗೊಂದಲಕ್ಕೊಳಗಾದದೇ ವೈದ್ಯ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ಕೊರೋನಾ ಪ್ರಕರಣವು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಹೋಗಬೇಕೆಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಮನವಿ ಮಾಡಿದ್ದಾರೆ.