ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ( ಅಪ್ಪುಗೌಡ)ಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷರಿಗೆ ಮನವಿ ಮಾಡಿಕೊಂಡ ಶಾಸಕರು ಆಳಂದ ತಾಲೂಕು ಗಡಿನಾಡ ಭಾಗದಲ್ಲಿರುವುದರಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ ಅದಕ್ಕಾಗಿ ಮಂಡಳಿಯಿಂದ ತಾಲೂಕಿಗೆ ಹೆಚ್ಚಿನ ಅನುದಾನ ನೀಡಿ ತಾಲೂಕಿನ ಅಭಿವೃದ್ಧಿಗೆ ಸಹಕರಿಸಬೇಕೆಂದು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಅಳಂದ ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೊರಳ್ಳಿ ಸೇರಿದಂತೆ ಇತರೆ ಮುಖಂಡರು ಇದ್ದರು.