ಕಲಬುರಗಿ: ಕೋವಿಡ್ -19 ಸೋಂಕಿಗೊಳಗಾಗಿ ಕಲಬುರಗಿ ಬುದ್ಧವಿಹಾರ ಕ್ವಾರಾಂಟೈನ್ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಕರ್ನಾಟಕ ಉಚ್ಛ ನ್ಯಾಯಾಲಯ, ಕಲಬುರಗಿ ಪೀಠದ ಮಹಿಳಾ ಸಿಬ್ಬಂದಿಯೊಬ್ಬರಿಗೆ ಹೈಕೋರ್ಟ್ನ ಗೌರವಾನ್ವಿತ ಹಿರಿಯ ನ್ಯಾಯಮೂರ್ತಿಗಳಾದ ಬಿ.ಎ. ಪಾಟೀಲ್ ಅವರು ಬುಧವಾರ ಹೂ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನ್ಯಾಯಮೂರ್ತಿಗಳು, ನೀವು ನಮ್ಮೆಲ್ಲರ ಕುಟುಂಬದ ಸದಸ್ಯರಿದ್ದಂತೆ, ಯಾವುದೇ ಅಂಜಿಕೆಯಿಲ್ಲದಂತೆ ಕರ್ತವ್ಯ ನಿರ್ವಹಿಸುವಂತೆ ಧೈರ್ಯ ತುಂಬಿದರು.
ಎಲ್ಲರೂ ಮಾಸ್ಕ್, ಸ್ಯಾನಿಟೈಸರ್ ಮುಂತಾದವುಗಳ ಬಳಸುವ ಮೂಲಕ ಸುರಕ್ಷತಾ ಕ್ರಮ ಅನುಸರಿಸಬೇಕು ಎಂದು ಅವರು ಕರೆ ನೀಡಿದರು.