ಕಲಬುರಗಿ ಜಿಲ್ಲೆಯಲ್ಲಿ ಭೀಕರ ಬರ: ನೀರಿನ ಸಮಸ್ಯೆ ಬಗೆಹರಿಸಲು ಸಚಿವ ಖರ್ಗೆ ಸಿಎಂಗೆ ಮನವಿ

0
312

ಕಲಬುರಗಿ: ಜಿಲ್ಲೆ ತೀವ್ರ ಬರದಿಂದ ತತ್ತರಿಸಿದ್ದು, ನಗರ ಹಾಗೂ ಗ್ರಾಮಾಂತರ ಭಾಗದ ಜನರಿಗೆ ನೀರು ಸರಬರಾಜು ಮಾಡುತ್ತಿದ್ದ ಭೀಮಾ ನದಿ ಬತ್ತಿ ಹೋಗಿರುವುದರಿಂದ, ಉಜನಿ ಜಲಾಶಯದಿಂದ ನೀರು ಹರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮುಂಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಬೇಸಿಗೆಯಿಂದಾಗಿ ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ತೀವ್ರ ನೀರಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಪ್ರಸ್ತುತ ನೀರಿನ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಬೇಕಾಗಿದ್ದು ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಹರಿಸುವಂತೆ ಅಲ್ಲಿನ ಸರಕಾರಕ್ಕೆ ಮನವಿ ಮಾಡಲು  ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದು ವಿನಂತಿಸಿಕೊಂಡಿರುತ್ತಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here