ಸುರಪುರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇತ್ತೀಚೆಗೆ ನಿಧನರಾದ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕರಿಗೆ ಹಾಗು ನಿವೃತ್ತ ಶಿಕ್ಷಕ ಪಾಂಡುರಂಗ ಚಿನ್ನಾಕಾರ ಅವರಿಗೆ ನುಡಿ ನಮನ ಸಲ್ಲಿಸಲಾಯಿತು.
ಗರುಡಾದ್ರಿ ಕಲಾ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಇಬ್ಬರು ಮಹನಿಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು.ನಂತರ ನ್ಯಾಯವಾದಿ ಜೆ.ಅಗಸ್ಟಿನ್ ಮಾತನಾಡಿದರು.ಇದೇ ಸಂದರ್ಭದಲ್ಲಿ ಕನ್ನಡ ಪುನರುಜ್ಜೀವನಗೊಳಿಸುವಂತೆ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಕಸಾಪ ತಾಲೂಕು ಅಧ್ಯಕ್ಷ ಶ್ರೀನಿವಾಸ ಜಾಲವಾದಿ,ರಾಘವೇಂದ್ರ ಬಾಡಿಯಾಳ,ಬಸವರಾಜ ಜಮದ್ರಖಾನಿ,ದೇವು ಹೆಬ್ಬಾಳ,ವೆಂಕಟೇಶಗೌಡ ಪಾಟೀಲ,ಲಕ್ಷ್ಮಣ ಗುತ್ತೇದಾರ,ರಾಘವೇಂದ್ರ ಭಕ್ರಿ ಭಾಗವಹಿಸಿದ್ದರು.