ಮಾಜಿ ಸಚಿವ ಜಿ. ರಾಮಕೃಷ್ಣ ನಿಧನಕ್ಕೆ ಡಿಸಿಎಂ ಗೋವಿಂದ ಕಾರಜೋಳ ಸಂತಾಪ

0
73

ಕಲಬುರಗಿ: ಮಾಜಿ ಸಚಿವರಾದ ಜಿ‌. ರಾಮಕೃಷ್ಣ ಅವರ ನಿಧನಕ್ಕೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಜಿ.ರಾಮಕೃಷ್ಣ ಅವರು ಸರಳ ವ್ಯಕ್ತಿತ್ವ ಹೊಂದಿದ್ದರು. ಜನಾನುರಾಗಿದ್ದ ಅವರು, ಸಚಿವರಾಗಿ, ಹಲವು ಬಾರಿ ಶಾಸಕರಾಗಿ ಸೇವೆಸಲ್ಲಿಸಿದ್ದಾರೆ. ಕಲಬುರಗಿ ಪ್ರದೇಶದ ಅಭಿವೃದ್ಧಿ ಕುರಿತ ವಿಷಯಗಳ ಬಗ್ಗೆ ತಮ್ಮೊಂದಿಗೆ ವಿಚಾರ ವಿನಿಮಯ ಮಾಡಿಕೊಳ್ಳುತ್ತಿದ್ದರು.

Contact Your\'s Advertisement; 9902492681

ಅವರ ನಿಧನದಿಂದ ಆ ಪ್ರದೇಶದ ಓರ್ವ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವುದಾಗಿ ಡಿಸಿಎಂ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here